ಲಾಹೋರ್: ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನವು ತನ್ನ ವಾಯಪ್ರದೇಶದ ಮೂಲಕ ಸಂಚರಿಸಲು ಪಾಕಿಸ್ತಾನ ತಾತ್ವಿಕವಾಗಿ ಅನುಮೋದನೆ ನೀಡಿದೆ.
ಜೂನ್ 13–14ರಂದು ಕಿರ್ಗಿಸ್ತಾನದ ಬಿಷ್ಕೆಕ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆಯಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.
ಬಾಲಾಕೋಟ್‌ನಲ್ಲಿದ್ದ ಜೈಷ್–ಎ–ಮೊಹಮ್ಮದ್ (ಜೆಇಎಂ) ಶಿಬಿರಗಳ ಮೇಲೆ ಭಾರತ ಫೆ. 26ರಂದು ವಾಯುದಾಳಿ ನಡೆಸಿದ ನಂತರ ಪಾಕಿಸ್ತಾನ ತನ್ನ ವಾಯುಪ್ರದೇಶದ ಮೇಲೆ ವಿಮಾನಗಳ ಸಂಚಾರವನ್ನು ನಿಷೇಧಿಸಿದೆ.
‘ಸಂಬಂಧಪಟ್ಟ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಭಾರತ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು’ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.