ಬೆಂಗಳೂರು: ನಾನೀಗ ಅಧಿಕಾರದಲ್ಲಿಲ್ಲ, ಹೀಗಾಗಿ ಹೆಚ್ಚು ಅಪಾಯಕಾರಿಯಾಗಬಲ್ಲೆ ಎಂದು ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ನೀಡಿದ್ದಾರೆ.
ಬುಧವಾರ ಪಾಕಿಸ್ತಾನದ ಪೇಶಾವರದಲ್ಲಿ ನಡೆದ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿರುವ ಇಮ್ರಾನ್ ಖಾನ್, ನಾನು ಅಧಿಕಾರದಲ್ಲಿರುವಾಗ ಸರ್ಕಾರದ ಭಾಗವಾಗಿದ್ದೆ, ಹೀಗಾಗಿ ಆ ಸಂದರ್ಭದಲ್ಲಿ ಅಪಾಯಕಾರಿಯಾಗಿರಲಿಲ್ಲ. ಆದರೆ ಈಗ ನಾನು ಸರ್ಕಾರದಲ್ಲಿಲ್ಲ. ಹೀಗಾಗಿ ಹೆಚ್ಚು ಅಪಾಯಕಾರಿ ಎಂದು ಹೇಳಿದ್ದಾರೆ.
ಅವಿಶ್ವಾಸ ನಿರ್ಣಯದ ಮೂಲಕ ಪ್ರಧಾನಿ ಹುದ್ದೆಯಿಂದ ಇಮ್ರಾನ್ ಖಾನ್ ಅವರನ್ನು ಕೆಳಗಿಳಿಸಲಾಗಿತ್ತು.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಇಮ್ರಾನ್ ಖಾನ್ ಅವರು, ಸುಪ್ರೀಂ ಕೋರ್ಟ್ ಮಧ್ಯರಾತ್ರಿ ಕಾರ್ಯನಿರ್ವಹಣೆ ಮಾಡಲು ಕೂಡ ತಯಾರಾಗಿತ್ತು. ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಸಂಚು ಹೂಡಲಾಗಿತ್ತು ಎಂದು ಆರೋಪಿಸಿದ್ದಾರೆ.
ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶಾಹಬಾಝ್ ಷರೀಫ್ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.