ಇಸ್ಲಾಮಾಬಾದ್:ಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ) ವಿದೇಶಾಂಗ ಸಚಿವರ ಸಮಿತಿಯ 46ನೇ ಶೃಂಗಸಭೆಯಲ್ಲಿ ಭಾಗವಹಿಸುವಂತೆಸುಷ್ಮಾ ಸ್ವರಾಜ್ ಅವರಿಗೆ ನೀಡಿದ್ದ ವಿಶೇಷ ಆಹ್ವಾನವನ್ನು ಹಿಂಪಡೆಯಲು ಯುಎಇ ನಿರಾಕರಿಸಿದ ಕಾರಣ, ಪಾಕಿಸ್ತಾನವು ಸಭೆಗೆ ಹಾಜರಾಗದಿರಲು ನಿರ್ಧರಿಸಿದೆ.
ಈ ಸಂಬಂಧ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾತನಾಡಿರುವಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ, ‘ವಿದೇಶಾಂಗ ಸಚಿವರ ಸಮಿತಿಯ ಶೃಂಗಸಭೆಯಲ್ಲಿಗೌರವ ಅತಿಥಿಯಾಗಿ ಭಾಗವಹಿಸಲು ಸುಷ್ಮಾ ಸ್ವರಾಜ್ ಅವರಿಗೆ ವಿಶೇಷ ಆಹ್ವಾನ ನೀಡಿರುವುದರಿಂದಾಗಿ ನಾನು ಆ ಸಭೆಯಲ್ಲಿ ಭಾಗವಹಿಸದಿರಲು ನಿರ್ಧಿರಿಸಿದ್ದೇನೆ’ ಎಂದು ತಿಳಿಸಿದ್ದಾರೆ.
‘ಪಾಕಿಸ್ತಾನವುಒಐಸಿ ಜೊತೆ ಹೊಂದಿರುವ ನಿಕಟ ಸಂಬಂಧವನ್ನು ಪರಿಗಣಿಸಿ ಶೃಂಗಸಭೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದ್ದೆ. ಅವರು ತಮ್ಮ ಪರಿಸ್ಥಿತಿಯನ್ನು ವಿವರಿಸಿದ್ದರು. ಹಾಗಾಗಿ ಸಭೆಯಲ್ಲಿ ಭಾಗವಹಿಸುವ ತನ್ನ ನಿರ್ಧಾರವನ್ನು ಪಾಕಿಸ್ತಾನ ಮತ್ತೊಮ್ಮೆ ಪರಿಶೀಲಿಸಲಿದೆ ಎಂದು ಫೆಬ್ರುವರಿ 26ರಂದು ಪತ್ರ ಬರೆದಿದ್ದೆ. ನಂತರ ಫೆಬ್ರುವರಿ 28ರಂದು ಸಂಸತ್ತಿನಲ್ಲಿ ವಿರೋಧ ಪಕ್ಷಗಳು ನೀಡಿದ ಸಲಹೆಯ ಮೇರೆಗೆ ನಾನು ಶೃಂಗಸಭೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ’ ಎಂದು ಹೇಳಿದ್ದಾರೆ.
ಸಂಘಟನೆಯ 46ನೇಶೃಂಗಸಭೆಯು ಮಾರ್ಚ್ 1 ಮತ್ತು 2ರಂದು ಅಬುಧಾಬಿಯಲ್ಲಿ ನಡೆಯಲಿದ್ದು,ಸುಷ್ಮಾ ಸ್ವರಾಜ್ ಅವರುಗೌರವ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಈ ಸಂಘದ ಸಭೆಗೆ ಭಾರತವನ್ನು ಆಹ್ವಾನಿಸಿರುವುದು ಇದೇ ಮೊದಲು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.