ADVERTISEMENT

ಪಾಕಿಸ್ತಾನ: ದೂರವಾಣಿ ಕರೆ ಪತ್ತೆ–ಐಎಸ್‌ಐಗೆ ಅಧಿಕಾರ

ಪಿಟಿಐ
Published 9 ಜುಲೈ 2024, 14:00 IST
Last Updated 9 ಜುಲೈ 2024, 14:00 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಇಸ್ಲಾಮಾಬಾದ್‌: ರಾಷ್ಟ್ರೀಯ ಭಧ್ರತೆ ಹಿತಾಸಕ್ತಿಯಿಂದ ದೂರವಾಣಿ ಕರೆ, ಸಂದೇಶಗಳನ್ನು ಪತ್ತೆಹಚ್ಚಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಸರ್ಕಾರ ಮಂಗಳವಾರ ಔಪಚಾರಿಕವಾಗಿ ಅನುಮೋದನೆ ನೀಡಿತು.

ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ತಂತ್ರಜ್ಞಾನ ಮತ್ತು ದೂರಸಂಪರ್ಕ ಸಚಿವಾಲಯವು ಪಾಕಿಸ್ತಾನ ದೂರಸಂಪರ್ಕ(ತಿದ್ದುಪಡಿ) ಕಾಯ್ದೆ-1996 ಅಡಿಯಲ್ಲಿ ಪ್ರಕಟಣೆ ಹೊರಡಿಸಿದೆ.

ADVERTISEMENT

‘ರಾಷ್ಟ್ರೀಯ ಭದ್ರತೆ ಹಿತದೃಷ್ಟಿಯಿಂದ ಸೆಕ್ಷನ್‌ 54ರ ಅಡಿಯಲ್ಲಿ ಐಎಸ್‌ಐ ಅಧಿಕಾರಿಗಳು ದೂರವಾಣಿ ಕರೆಗಳು ಮತ್ತು ಸಂದೇಶವನ್ನು ಪತ್ತೆ ಮಾಡಲು ಅವಕಾಶ ನೀಡಲಾಗುತ್ತಿದೆ’ ಎಂದು ತಿಳಿಸಿದೆ.

ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಂಡ ನಂತರ ಪ್ರಕಟಣೆ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿರೋಧ ಪಕ್ಷ ಪಾಕಿಸ್ತಾನ್‌ ತೆಹ್ರೀಕ್‌–ಎ–ಇನ್ಸಾಫ್‌ (ಪಿಟಿಐ), ಸಾಮಾಜಿಕ ಜಾಲತಾಣಗಳ ಮೂಲಕ ಬೆಂಬಲಿಗರನ್ನು ಗಳಿಸುತ್ತಿದೆ. ಹೀಗಾಗಿ ಜಾಲತಾಣಗಳ ನಿಯಂತ್ರಣಕ್ಕೆ ಸರ್ಕಾರವು ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.