ADVERTISEMENT

ಪಾಕಿಸ್ತಾನ: ಪಿಟಿಐ ಮುಖ್ಯಸ್ಥರಿಗೆ ಸ್ಪರ್ಧಿಸಲು ಸುಪ್ರೀಂಕೋರ್ಟ್‌ ಅನುಮತಿ

ಪಿಟಿಐ
Published 27 ಜನವರಿ 2024, 15:42 IST
Last Updated 27 ಜನವರಿ 2024, 15:42 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಇಸ್ಲಾಮಾಬಾದ್‌: ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಪಾಕಿಸ್ತಾನ್‌ ತೆಹ್ರೀಕ್‌ ಎ ಇನ್ಸಾಫ್‌ (ಪಿಟಿಐ) ಪಕ್ಷದ ಅಧ್ಯಕ್ಷ ಪರ್ವೇಜ್‌ ಇಲಾಹಿ ಸೇರಿದಂತೆ ಕೆಲ ಹಿರಿಯ ನಾಯಕರಿಗೆ ಫೆಬ್ರುವರಿ 8ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅಲ್ಲಿನ ಸುಪ್ರೀಂಕೋರ್ಟ್‌ ಅನುಮತಿ ನೀಡಿದೆ.

ತಮ್ಮ ಉಮೇದುವಾರಿಕೆಯನ್ನು ತಿರಸ್ಕರಿಸಿದ್ದ ಚುನಾವಣಾ ಆಯೋಗ ಮತ್ತು ಲಾಹೋರ್‌ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಪರ್ವೇಜ್‌ ಇಲಾಹಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ADVERTISEMENT

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮನ್ಸೂರ್‌ ಅಲಿ ಶಾ ನೇತೃತ್ವದ ತ್ರಿ ಸದಸ್ಯ ಪೀಠವು, ಇಲಾಹಿ ಅವರಿಗೆ ಚುನಾವಣಾ ಚಿಹ್ನೆ ನೀಡುವಂತೆ ಮತ್ತು ಅದನ್ನು ಬ್ಯಾಲೆಟ್‌ ಪೇಪರ್‌ನಲ್ಲಿ ಸೇರಿಸುವಂತೆ ಪಾಕಿಸ್ತಾನ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತು.

ಅಲ್ಲದೆ ಪಿಟಿಐನ ಇತರ ನಾಯಕರಾದ ಉಮರ್ ಅಸ್ಲಂ, ತಾಹಿರ್‌ ಸಾದಿಕ್‌, ಸನಂ ಜಾವೇದ್‌, ಶೌಕತ್‌ ಬಸ್ರಾ ಅವರಿಗೂ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಕೋರ್ಟ್‌ ಅನುಮತಿ ನೀಡಿ ಆದೇಶ ಹೊರಡಿಸಿತು.

90 ಸಾವಿರ ಮತಗಟ್ಟೆ: ಫೆಬ್ರುವರಿ 8ರ ಸಾರ್ವತ್ರಿಕ ಚುನಾವಣೆಗಾಗಿ ದೇಶದಲ್ಲಿ 12.80 ಕೋಟಿ ಮತದಾರರಿಗೆ 90,675 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಪಾಕಿಸ್ತಾನದ ಚುನಾವಣಾ ಆಯೋಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.