ADVERTISEMENT

ಭ್ರಷ್ಟಾಚಾರ ವಿರೋಧಿ ಕಾನೂನು ತಿದ್ದುಪಡಿ: ಸರ್ಕಾರದ ಪರ ಪಾಕ್ ಸುಪ್ರೀಂಕೋರ್ಟ್ ಆದೇಶ

ಪಿಟಿಐ
Published 6 ಸೆಪ್ಟೆಂಬರ್ 2024, 12:43 IST
Last Updated 6 ಸೆಪ್ಟೆಂಬರ್ 2024, 12:43 IST
<div class="paragraphs"><p>ಪಾಕಿಸ್ತಾನ</p></div>

ಪಾಕಿಸ್ತಾನ

   

ಇಸ್ಲಾಮಾಬಾದ್‌: ಭ್ರಷ್ಟಾಚಾರ ವಿರೋಧಿ ಕಾನೂನುಗಳಿಗೆ ತಂದಿರುವ ತಿದ್ದುಪಡಿಗಳನ್ನು ಮರುಸ್ಥಾಪಿಸಲು ಪಾಕಿಸ್ತಾನದ ಸುಪ್ರೀಂ ಕೋರ್ಟ್, ಸರ್ಕಾರದ ಪರವಾಗಿ ಶುಕ್ರವಾರ ಸರ್ವಾನುಮತದ ತೀರ್ಪು ನೀಡಿದೆ. ಈ ತೀರ್ಪು ಶೆಹಬಾಜ್ ಷರೀಫ್ ನೇತೃತ್ವದ ಸರ್ಕಾರಕ್ಕೆ ಪ್ರಮುಖ ಪರಿಹಾರ ಒದಗಿಸಿದೆ.

ಭ್ರಷ್ಟಾಚಾರ ವಿರೋಧಿ ಕಾನೂನುಗಳ ತಿದ್ದುಪಡಿಗಳನ್ನು ಮಾಜಿ ಪ್ರಧಾನಿ ಖಾನ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ, ಸರ್ಕಾರ ಮತ್ತು ಇತರ ಪಕ್ಷಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಆಲಿಸಿದ ಐವರು ನ್ಯಾಯಮೂರ್ತಿಗಳಿದ್ದ ಪೀಠವು ಜೂನ್ 6ರಂದು ತೀರ್ಪನ್ನು ಕಾಯ್ದಿರಿಸಿತ್ತು. ಈ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ (ಸಿಜೆಪಿ) ಖಾಜಿ ಫಯೇಜ್‌ ಇಸಾ ಅವರು ಶುಕ್ರವಾರ ಪ್ರಕಟಿಸಿದರು.

ADVERTISEMENT

ಈ ತೀರ್ಪಿನಿಂದ ಪ್ರಧಾನಿ ಶೆಹಬಾಜ್‌ ಮತ್ತು ಅವರ ಹಿರಿಯ ಸಹೋದರ ನವಾಜ್ ಷರೀಫ್ ಹಾಗೂ ದೇಶದ ಹಲವಾರು ಪ್ರಮುಖ ರಾಜಕಾರಣಿಗಳಿಗೆ ಅನುಕೂಲವಾಗಲಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.