ADVERTISEMENT

ಪಾಕ್‌: ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬಾಂಬ್‌ ಸ್ಫೋಟದ ವಿಡಿಯೊಗಳು...

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ನವೆಂಬರ್ 2024, 9:34 IST
Last Updated 9 ನವೆಂಬರ್ 2024, 9:34 IST
<div class="paragraphs"><p>ಬಾಂಬ್‌ ಸ್ಫೋಟ</p></div>

ಬಾಂಬ್‌ ಸ್ಫೋಟ

   

ಪೇಶಾವರ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ದಾಳಿಯಲ್ಲಿ 25 ಮಂದಿ ಸಾವಿಗೀಡಾಗಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಜಾಫರ್ ಎಕ್ಸ್‌ಪ್ರೆಸ್‌ ರೈಲು ಫ್ಲಾಟ್‌ಫಾರಂಗೆ ಆಗಮಿಸುವುದಕ್ಕೂ ಮುನ್ನ ಬೆಳಿಗ್ಗೆ 9 ಗಂಟೆ ಸುಮಾರಿಗೆ ನಿಲ್ದಾಣದ ಬುಕ್ಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ ಪೊಲೀಸ್‌ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

ADVERTISEMENT

ನಿಲ್ದಾಣದಲ್ಲಿರುವ ಸಿಸಿಕ್ಯಾಮೆರಾದಲ್ಲಿ ಸ್ಫೋಟದ ದೃಶ್ಯ ಸೆರೆಯಾಗಿದೆ. ಈ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.