ಇಸ್ಲಾಮಾಬಾದ್: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನ ಮಾಜಿ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಫೈಜ್ ಹಮೀದ್ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡದ್ದಾಗಿ ಪಾಕ್ ಸೇನೆ ಸೋಮವಾರ ಹೇಳಿದೆ.
ಗೃಹ ನಿರ್ಮಾಣ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಫೈಜ್ ಅವರು ಸೇನಾ ವಿಚಾರಣೆ ಎದುರಿಸಲಿದ್ದಾರೆ.
‘ಫೈಜ್ ಹಮೀದ್ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು, ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನ ಆದೇಶದ ಪ್ರಕಾರ ಪಾಕ್ ಸೇನೆಯು ವಿವರವಾದ ತನಿಖೆ ಕೈಗೊಂಡಿದೆ’ ಎಂದು ಸೇನೆಯ ಮೂಲಗಳು ಹೇಳಿವೆ.
ಹಮೀದ್ ಅವರು 2019 ರಿಂದ 2021ರ ವರೆಗೆ ಐಎಸ್‌ಐ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.