ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್, ಹಠಾತ್ತಾಗಿ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕೋವಿಡ್ ಪಿಡುಗಿನ ಹಿನ್ನೆಲೆಯಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ, ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್ಗೆ ಮಾಜಿ ಪ್ರಧಾನಿ ಸಂಸತ್‌ಗೆ ತಪ್ಪು ಮಾಹಿತಿ ನೀಡಿದ್ದರು ಎಂಬ ಆರೋಪದ ಕುರಿತಾಗಿ ತನಿಖೆ ನಡೆಯುತ್ತಿದೆ.
ಈ ಪಾರ್ಟಿಗೇಟ್ ಹಗರಣದಲ್ಲಿ ಬೋರಿಸ್ ಜಾನ್ಸನ್ ವಿರುದ್ಧ ಸಂಸದೀಯ ಸಮಿತಿಯಿಂದ ವರದಿ ಸಲ್ಲಿಕೆಯಾಗಲಿದ್ದು, ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಈ ವರದಿ ಬಿಡುಗಡೆಗೆ ಮೊದಲೇ ಜಾನ್ಸನ್ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನಾನು ಸುಳ್ಳು ಹೇಳಿಲ್ಲ, ತಮ್ಮ ವಿರುದ್ಧ ಪಿತೂರಿ ನಡೆದಿದೆ ಎಂದು 58 ವರ್ಷದ ಬೋರಿಸ್ ಜಾನ್ಸನ್ ಬಿಡುಗಡೆ ಮಾಡಿರುವ ಪ್ರಕಟಣೆ ಹೇಳಿದೆ. ತನಿಖಾ ಸಂಸ್ಥೆಯು ಸತ್ಯಾಂಶವನ್ನು ಪರಿಗಣಿಸದೇ ಯಾವುದೇ ಪುರಾವೆಯಿಲ್ಲದೆ ನನ್ನನ್ನು ತಪ್ಪಿತಸ್ಥನೆಂದು ಸಾಬೀತು ಮಾಡಲು ಹೊರಟಿದೆ ಎಂದು ದೂರಿದ್ದಾರೆ.
ಮಾರ್ಚ್ ತಿಂಗಳಲ್ಲಿ ಸದನದ ದಿಕ್ಕು ತಪ್ಪಿಸುವ ಪ್ರಮಾದ ಎಸಗಿದ್ದಕ್ಕೆ ಬೋರಿಸ್ ಜಾನ್ಸನ್ ಕ್ಷಮೆಯಾಚಿಸಿದ್ದರು.
ಈಗ ತೆರವಾಗಿರುವ ಸಂಸತ್ ಸ್ಥಾನಕ್ಕೆ ಮರು ಚುನಾವಣೆಯಾಗುವ ಸಾಧ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.