ವಾಷಿಂಗ್ಟನ್: ಫೈಜರ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಿಡ್-19 ಪ್ರಾಯೋಗಿಕಮಾತ್ರೆಗಳು, ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಸೋಂಕಿನ ವಿರುದ್ಧವೂ ಪರಿಣಾಮಕಾರಿ ಎನಿಸಿದೆ ಎಂದು ಸಂಸ್ಥೆ ಹೇಳಿದೆ.
ಸಂಸ್ಥೆಯು 2,250 ವ್ಯಕ್ತಿಗಳಲ್ಲಿ ನಡೆಸಿದ ಪ್ರಾಯೋಗಿಕ ಸಂಶೋಧನೆಯಲ್ಲಿ ಕೋವಿಡ್-19 ವಿರುದ್ಧ ಪರಿಣಾಮಕಾರಿ ಎಂದು ಹೇಳಿಕೊಂಡಿದೆ. ಕೋವಿಡ್ ರೋಗಲಕ್ಷಣ ಕಾಣಿಸಿಕೊಂಡ ಆರಂಭಿಕ ಹಂತದಲ್ಲಿ ಮಾತ್ರೆಯನ್ನು ಸೇವಿಸಿದ ವಯಸ್ಕರಲ್ಲಿ ಆಸ್ಪತ್ರೆಗೆ ದಾಖಲಾಗುವ ಹಾಗೂ ಸಾವು ಸಂಭವಿಸುವ ಪ್ರಕರಣಗಳು ಸುಮಾರು ಶೇಕಡಾ 89ರಷ್ಟು ಕಡಿಮೆಗೊಳಿಸಿದೆ ಎಂದು ಫಲಿತಾಂಶ ವರದಿಯಲ್ಲಿ ತಿಳಿಸಿದೆ.
ಪ್ರತ್ಯೇಕ ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಓಮೈಕ್ರಾನ್ ರೂಪಾಂತರ ತಳಿಯ ವಿರುದ್ಧವೂ ಪರಿಣಾಮಕಾರಿಯಾಗಿದೆ ಎಂದು ಕಂಪನಿಯು ಘೋಷಿಸಿದೆ.
ಅಮೆರಿಕದಲ್ಲಿ ಮಗದೊಮ್ಮೆ ಕೋವಿಡ್-19 ಪ್ರಕರಣ ಏರಿಕೆಯಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುವ ಸಂಖ್ಯೆಯಲ್ಲೂ ಹೆಚ್ಚಳ ಕಂಡುಬಂದಿದೆ. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಅಮೆರಿಕದಲ್ಲಿ ಇದುವರೆಗೆ 8 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
'ಕೋವಿಡ್ ವಿರುದ್ಧದಹೋರಾಟದಲ್ಲಿ ಫೈಜರ್ ಔಷಧವು ಮತ್ತೊಂದು ಶಕ್ತಿಶಾಲಿ ಸಾಧನ' ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.