ADVERTISEMENT

ನೇಪಾಳ | ಟೇಕ್‌ಆಫ್‌ ವೇಳೆ ವಿಮಾನ ಪತನ: 18 ಮಂದಿ ಸಾವು, ಪೈಲಟ್‌ಗೆ ಗಾಯ

ಏಜೆನ್ಸೀಸ್
Published 24 ಜುಲೈ 2024, 8:12 IST
Last Updated 24 ಜುಲೈ 2024, 8:12 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಕಠ್ಮಂಡು: ನೇಪಾಳದ ಕಠ್ಮಂಡುವಿನ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೌರ್ಯ ಏರ್‌ಲೈನ್ಸ್‌ನ ವಿಮಾನವೊಂದು ಟೇಕ್‌ಆಫ್‌ ವೇಳೆ ಪತನವಾಗಿದೆ.

ಘಟನೆಯಲ್ಲಿ ವಿಮಾನದಲ್ಲಿದ್ದ 18 ಮಂದಿ ತಾಂತ್ರಿಕ ಸಿಬ್ಬಂದಿ ಮೃತಪಟ್ಟಿದ್ದು, ಪೈಲಟ್‌ ಒಬ್ಬರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ADVERTISEMENT

ಬೆಳಗ್ಗೆ 11 ಗಂಟೆ ಸುಮಾರಿಗೆ ವಿಮಾನ ಪೋಖರಾಗೆ ತೆರಳುತ್ತಿತ್ತು, ಈ ವೇಳೆ ಅಪಘಾತ ಸಂಭವಿಸಿದೆ. ಟೇಕ್‌ಆಫ್‌ ವೇಳೆ ವಿಮಾನವು ರನ್‌ವೇಯಿಂದ ಹೊರಬಿದ್ದಿದ್ದು, ಬೆಂಕಿ ಹೊತ್ತಿಕೊಂಡಿದೆ.

ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೀಡುಬಿಟ್ಟಿದ್ದು, 18 ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.