ADVERTISEMENT

G7 Summit | ಇಟಲಿ ತಲುಪಿದ ‍ಪ್ರಧಾನಿ ಮೋದಿ: ದ್ವಿಪಕ್ಷೀಯ ಸಭೆಯಲ್ಲಿ ಭಾಗಿ

ಪಿಟಿಐ
Published 14 ಜೂನ್ 2024, 2:31 IST
Last Updated 14 ಜೂನ್ 2024, 2:31 IST
<div class="paragraphs"><p>ಇಟಲಿ ತಲುಪಿದ ‍ಪ್ರಧಾನಿ ಮೋದಿ</p></div>

ಇಟಲಿ ತಲುಪಿದ ‍ಪ್ರಧಾನಿ ಮೋದಿ

   

ಇಟಲಿ: ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಯ ಅಪುಲಿಯಾಗೆ ತಲುಪಿದ್ದಾರೆ. 

ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಇಟಲಿಯ ಬ್ರಿಂಡೈಸಿ ವಿಮಾನ ನಿಲ್ದಾಣದಲ್ಲಿನ ವಿಡಿಯೊ ಹಂಚಿಕೊಂಡಿದ್ದಾರೆ. ‘ಇಂದು ನಾವು ವಿಶ್ವ ನಾಯಕರೊಂದಿಗೆ ಹಲವಾರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದೇವೆ. ಮೋದಿ ಅವರು ಜಿ7 ಶೃಂಗಸಭೆಯ ಅಧಿವೇಶನದಲ್ಲಿ ಮಾತನಾಡಲಿದ್ದಾರೆ’ ಎಂದು ಹೇಳಿದ್ದಾರೆ.

ADVERTISEMENT

ಭಾರತವು ಕೃತಕ ಬುದ್ಧಿಮತ್ತೆ, ಇಂಧನ, ಆಫ್ರಿಕಾ ಮತ್ತು ಮೆಡಿಟರೇನಿಯನ್ ವಿಷಯಗಳ ಚರ್ಚೆ ಮೇಲೆ ಗಮನ ಕೇಂದ್ರೀಕರಿಸಲಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಜೂನ್ 14 ರಂದು ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಯ ಅಪುಲಿಯಾ ಪ್ರದೇಶಕ್ಕೆ ಪ್ರಯಾಣಿಸುತ್ತಿದ್ದೇನೆ. ಅಭಿವೃದ್ಧಿಯಲ್ಲಿ ಹಿಂದುಳಿದ ದೇಶಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಈ ಅಧಿವೇಶನದಲ್ಲಿ ಚರ್ಚಿಸಲಾಗುವುದು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ಪೋಪ್ ಫ್ರಾನ್ಸಿಸ್ ಜತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ. 

ಮೂರನೇ ಅವಧಿಗೆ ಪ್ರಧಾನಿಯಾದ ನಂತರ ಮೋದಿ ಅವರ ಮೊದಲ ವಿದೇಶ ಪ್ರವಾಸ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.