ಕೀವ್: ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉಕ್ರೇನ್‌ಗೆ ಭೇಟಿ ನೀಡಿದ್ದಾರೆ.
ದ್ವಿಪಕ್ಷೀಯ ಸಹಕಾರ ಬಲಪಡಿಸಲು ಮತ್ತು ಸದ್ಯದ ಉಕ್ರೇನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಬಗ್ಗೆ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಮೋದಿ ಮಾತುಕತೆ ನಡೆಸುವ ನಿರೀಕ್ಷೆಯಿದೆ.
1991ರಲ್ಲಿ ಉಕ್ರೇನ್ ಸ್ವತಂತ್ರವಾದ ನಂತರ ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ಭೇಟಿ ನೀಡಿದ್ದು ಇದೇ ಮೊದಲು. ಪ್ರಧಾನಿ ಅವರು ಪೋಲೆಂಡ್‌ನಿಂದ ಕೀವ್‌ಗೆ ‘ರೈಲ್ ಫೋರ್ಸ್ ಒನ್’ ರೈಲಿನಲ್ಲಿ ಬಂದಿಳಿದರು.
ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ಭಾರತ ಈವರೆಗೂ ಖಂಡಿಸಿಲ್ಲ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷವನ್ನು ಪರಿಹರಿಸಲು ಉಭಯ ರಾಷ್ಟ್ರಗಳನ್ನು ಭಾರತ ಒತ್ತಾಯಿಸುತ್ತಲೇ ಬಂದಿದೆ.
ಇದಕ್ಕೂ ಮುನ್ನ ಅವರು ಪೋಲೆಂಡ್‌ಗೆ ಭೇಟಿ ನೀಡಿದ್ದರು. ಕಳೆದ 45 ವರ್ಷಗಳ ನಂತರ ಈ ದೇಶಕ್ಕೆ ಭಾರತದ ಪ್ರಧಾನಿಯೊಬ್ಬರ ಮೊದಲ ಅಧಿಕೃತ ಭೇಟಿ ಇದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.