ವ್ಯಾಟಿಕನ್ ಸಿಟಿ: ಜಿ20 ಶೃಂಗಸಭೆ ಪ್ರಯುಕ್ತ ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವ್ಯಾಟಿಕನ್‌ನಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥರಾಗಿರುವ ಪೋಪ್ ಫ್ರಾನ್ಸಿಸ್ ಅವರನ್ನು ಪ್ರಧಾನಿ ಮೋದಿ ಅವರು ಭೇಟಿಯಾಗಿದ್ದು ಇದೇ ಮೊದಲು. 2013ರಲ್ಲಿ ಫ್ರಾನ್ಸಿಸ್ ಅವರು ಪೋಪ್ ಆದ ಬಳಿಕ ಅವರನ್ನು ಭೇಟಿಯಾದ ಭಾರತದ ಮೊದಲ ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.
ಕೋವಿಡ್–19 ಸೇರಿದಂತೆ ಜಗತ್ತಿನ ಇತರ ವಿಚಾರಗಳ ಬಗ್ಗೆ ಈ ವೇಳೆ ಮಾತುಕತೆ ನಡೆದಿದೆ. ಜಗತ್ತಿನಲ್ಲಿ ಶಾಂತಿ ಮತ್ತು ನೆಮ್ಮದಿ ಕಾಯ್ದುಕೊಳ್ಳುವುದೂ ಸೇರಿದಂತೆ ಹಲವು ಆಸಕ್ತಿಯ ಕ್ಷೇತ್ರಗಳ ಕುರಿತು ಚರ್ಚೆ ನಡೆದಿದೆ.
ವ್ಯಾಟಿಕನ್‌ನಲ್ಲಿ ಮೋದಿ ಅವರೊಂದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.