ಕೀವ್: ಯುದ್ಧಪೀಡಿತ ಉಕ್ರೇನ್ ಭೇಟಿ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಏಳು ಗಂಟೆಯೊಳಗೆ ಅಲ್ಲಿಂದ ತೆರಳಿದ್ದಾರೆ.
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದ ಮೋದಿ, ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗಾಣಿಸಲು ವೈಯಕ್ತಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
‘ಇದೊಂದು ಐತಿಹಾಸಿಕ ಭೇಟಿಯಾಗಿದೆ. ಭಾರತ ಹಾಗೂ ಉಕ್ರೇನ್ ನಡುವಿನ ಸಂಬಂಧವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಬಂದಿದ್ದೇನೆ. ಝೆಲೆನ್‌ಸ್ಕಿ ಅವರೊಂದಿಗಿನ ಮಾತುಕತೆ ಉಪಯುಕ್ತವಾಗಿತ್ತು. ಶಾಂತಿ ಸದಾ ಮೇಲುಗೈ ಸಾಧಿಸಬೇಕು ಎಂಬುದನ್ನೇ ಭಾರತ ಸದಾ ನಂಬಿದೆ. ಉಕ್ರೇನ್ ಸರ್ಕಾರ ಹಾಗೂ ಅಲ್ಲಿನ ಜನರು ತೋರಿದ ಪ್ರೀತಿಗೆ ಧನ್ಯವಾದಗಳು’ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 1991ರಲ್ಲಿ ಉಕ್ರೇನ್ ಸ್ವತಂತ್ರ್ಯ ದೇಶವಾದ ನಂತರ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂದೆನಿಸಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.