ವಿಯನ್‌ಟಿಯಾನ್ (ಲಾವೋಸ್) (ಪಿಟಿಐ): ಭಾರತ ಮತ್ತು ಲಾವೋಸ್ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಲಾವೋಸ್ ಪ್ರಧಾನಿ ಸಾನೆಕ್ಸೆ ಸಿಫೆಂಡೋನ್ ಶುಕ್ರವಾರ ಮಾತುಕತೆ ನಡೆಸಿದರು.
ರಕ್ಷಣೆ, ನವೀಕರಿಸಬಹುದಾದ ಇಂಧನ ಮತ್ತು ಇತರ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರ ಬಲಪಡಿಸುವ ಕುರಿತು ಉಭಯ ನಾಯಕರು ಚರ್ಚಿಸಿದರು.
21ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು 10 ರಾಷ್ಟ್ರಗಳ ಗುಂಪಿನ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಗುರುವಾರ ವಿಯನ್‌ಟಿಯಾನ್‌ಗೆ ಬಂದಿಳಿದಿದ್ದರು.
‘ಪಾರಂಪರಿಕ ತಾಣಗಳ ಸಂರಕ್ಷಣೆ ಮತ್ತು ಪುನಶ್ಚೇತನ, ರಾಷ್ಟ್ರಗಳ ಸಾಮರ್ಥ್ಯ ಹೆಚ್ಚಿಸುವುದು, ಆರ್ಥಿಕತೆ, ರಕ್ಷಣಾ ಕ್ಷೇತ್ರದ ಸಂಬಂಧಗಳು, ಸಾಂಸ್ಕೃತಿಕತೆ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಹಲವು ಕ್ಷೇತ್ರಗಳ ಕುರಿತು ಉಭಯ ರಾಷ್ಟ್ರಗಳ ಸಂಬಂಧ ಹೆಚ್ಚಿಸುವ ಬಗ್ಗೆ ಮಾತುಕತೆ ನಡೆದಿವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.