ADVERTISEMENT

PM Modi In Austria | ಆಸ್ಟ್ರಿಯಾ ಅಧ್ಯಕ್ಷ ಅಲೆಕ್ಸಾಂಡರ್ ಜೊತೆ ಮೋದಿ ಮಾತುಕತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜುಲೈ 2024, 15:56 IST
Last Updated 10 ಜುಲೈ 2024, 15:56 IST
<div class="paragraphs"><p>ನರೇಂದ್ರ ಮೋದಿ ಹಾಗೂ&nbsp;ಅಲೆಕ್ಸಾಂಡರ್ ವ್ಯಾನ್ ಡೆರ್ ಬೆಲ್ಲನ್</p></div>

ನರೇಂದ್ರ ಮೋದಿ ಹಾಗೂ ಅಲೆಕ್ಸಾಂಡರ್ ವ್ಯಾನ್ ಡೆರ್ ಬೆಲ್ಲನ್

   

(ಚಿತ್ರ ಕೃಪೆ: X/@narendramodi)

ವಿಯನ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರಿಯಾದ ಅಧ್ಯಕ್ಷ ಅಲೆಕ್ಸಾಂಡರ್ ವ್ಯಾನ್ ಡೆರ್ ಬೆಲ್ಲನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ADVERTISEMENT

ಈ ಕುರಿತು ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಆಸ್ಟ್ರಿಯಾದ ಅಧ್ಯಕ್ಷ ಅಲೆಕ್ಸಾಂಡರ್ ವ್ಯಾನ್ ಡೆರ್ ಬೆಲ್ಲನ್ ಅವರೊಂದಿಗೆ ಧನಾತ್ಮಕ ಚರ್ಚೆ ನಡೆಸಲಾಯಿತು. ಭಾರತ ಹಾಗೂ ಆಸ್ಟ್ರಿಯಾದ ಸಹಕಾರವನ್ನು ವಿಸ್ತರಿಸುವ ಕುರಿತು ಚರ್ಚಿಸಲಾಯಿತು' ಎಂದು ಉಲ್ಲೇಖಿಸಿದ್ದಾರೆ.

ಇದೇ ವೇಳೆ ಭಾರತ ಹಾಗೂ ಆಸ್ಟ್ರಿಯಾದ ಉದ್ಯಮಿಗಳನ್ನು ಭೇಟಿಯಾದ ಪ್ರಧಾನಿ ಮೋದಿ, ವ್ಯಾಪಾರ ಹಾಗೂ ವಾಣಿಜ್ಯ ವೃದ್ಧಿಯ ಬಗ್ಗೆ ಚರ್ಚೆ ನಡೆಸಿದ್ದಾರೆ.

40 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತ ಪ್ರಧಾನಿ ಭೇಟಿ...

40 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿದ್ದಾರೆ. ಈ ಹಿಂದೆ 1983ರಲ್ಲಿ ಆಗಿನ ಪ್ರಧಾನಿ ಇಂದಿರಾಗಾಂಧಿ ಭೇಟಿ ನೀಡಿದ್ದರು.

ರಷ್ಯಾ‌ಕ್ಕೆ ಎರಡು ದಿನದ ಪ್ರವಾಸ ಪೂರ್ಣಗೊಳಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರಿಯಾಗೆ ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.