ಬಂದಾರ್ ಸೆರಿ ಬೆಗಾವನ್: ಬ್ರೂನೈ ದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಹೈಕಮಿಷನ್‌ನ ಮುಖ್ಯ ಕಚೇರಿಯನ್ನು ಇಂದು (ಮಂಗಳವಾರ) ಉದ್ಘಾಟಿಸಿದರು.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಚಿತ್ರ ಹಂಚಿರುವ ಪ್ರಧಾನಿ ಮೋದಿ, 'ಇದು ಉಭಯ ದೇಶಗಳ ನಡುವಣ ಬಲವಾದ ಬಾಂಧವ್ಯ ಸೂಚಕವಾಗಿದೆ' ಎಂದು ಬಣ್ಣಿಸಿದ್ದಾರೆ.
'ಭಾರತೀಯ ಸಮುದಾಯದ ಜನರಿಗೆ ಇದರಿಂದ ನೆರವಾಗಲಿದೆ' ಎಂದು ಪ್ರಧಾನಿ ಉಲ್ಲೇಖಿಸಿದ್ದಾರೆ.
ಈ ಸಂದರ್ಭದಲ್ಲಿ ಭಾರತೀಯ ಸಮುದಾಯದ ಜನರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ದ್ವಿಪಕ್ಷೀಯ ಮಾತುಕತೆಗಾಗಿ ಭಾರತೀಯ ಪ್ರಧಾನಿಯೊಬ್ಬರು ಬ್ರೂನೈ ದೇಶಕ್ಕೆ ಭೇಟಿ ನೀಡಿದ್ದಾರೆ.
ಭಾರತ ಹಾಗೂ ಬ್ರೂನೈ ರಾಜತಾಂತ್ರಿಕ ಸಂಬಂಧ ಸ್ಥಾಪನೆಯಾಗಿ 40ನೇ ವರ್ಷಾಚರಣೆಯ ವೇಳೆಯಲ್ಲಿ ಈ ಭೇಟಿ ನಡೆದಿದೆ.
ಮಸೀದಿಗೆ ಭೇಟಿ...
ಬ್ರೂನೈ ಭೇಟಿಯ ವೇಳೆ ಅಲಿ ಸೈಫುದ್ದೀನ್ ಮಸೀದಿಗೆ ಭೇಟಿ ನೀಡಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಚಿತ್ರಗಳನ್ನು ಹಂಚಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.