ನ್ಯೂಯಾರ್ಕ್: ಅಮೆರಿಕಕ್ಕೆ ಮೂರು ದಿನಗಳ 'ಯಶಸ್ವಿ' ಹಾಗೂ 'ಗಮನಾರ್ಹ' ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತವರಿಗೆ ಹಿಂದಿರುಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದು, 'ಪ್ರಧಾನಿ ಮೋದಿ ಅವರ ಅಮೆರಿಕ ಪ್ರವಾಸವನ್ನು 'ಯಶಸ್ವಿ' ಮತ್ತು 'ಗಮನಾರ್ಹ' ಎಂದು ಬಣ್ಣಿಸಿದ್ದಾರೆ.
ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದರು. ಈ ವೇಳೆ ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ನಿವಾಸದಲ್ಲಿ ಉಭಯ ನಾಯಕರು ಭಾರತ-ಅಮೆರಿಕ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಸಂಬಂಧ ಚರ್ಚೆ ನಡೆಸಿದ್ದರು.
ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.
ಅಮೆರಿಕದಲ್ಲಿ ನೆರೆದಿದ್ದ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದರು.
ವಿಶ್ವಸಂಸ್ಥೆಯ 'ಭವಿಷ್ಯದ ಶೃಂಗ'ದಲ್ಲೂ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡರು. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರೊಂದಿಗೂ ಚರ್ಚೆ ನಡೆಸಿದರು.
ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿ ವೇಳೆ ಭಾರತಕ್ಕೆ ಅತ್ಯಮೂಲ್ಯ 297 ಪ್ರಾಚೀನ ವಸ್ತುಗಳನ್ನು ಅಮೆರಿಕ ಹಿಂದಿರುಗಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.