ಲಂಡನ್: ಬ್ರೆಜಿಲ್‌ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ವೇಳೆ ಹಲವು ರಾಷ್ಟ್ರಗಳ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್, ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ, ನಾರ್ವೆಯ ಪ್ರಧಾನಿ ಜೋನಸ್ ಗಾರ್ ಮತ್ತು ಪೋರ್ಚುಗಲ್‌ನ ಪ್ರಧಾನಿ ಲೂಯಿಸ್ ಮಾಂಟೆನೆಗ್ರೊ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ದೇಶಗಳ ನಾಯಕರೊಂದಿಗಿನ ಮಾತುಕತೆಯ ಕುರಿತು ಪ್ರತ್ಯೇಕ ಪೋಸ್ಟ್‌ಗಳಲ್ಲಿ ಪ್ರಧಾನಿ ಮೋದಿ ಉಲ್ಲೇಖ ಮಾಡಿದ್ದಾರೆ.
'ಜಿ20 ಶೃಂಗದ ವೇಳೆ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾಗಿರುವುದಕ್ಕೆ ಖುಷಿಯಾಗಿದೆ. ನಮ್ಮ ಮಾತುಕತೆ ರಕ್ಷಣೆ, ಭದ್ರತೆ, ವ್ಯಾಪಾರ ಮತ್ತು ತಂತ್ರಜ್ಞಾನದಲ್ಲಿ ಬಾಂಧವ್ಯವನ್ನು ಗಟ್ಟಿಗೊಳಿಸುವುದರತ್ತ ಕೇಂದ್ರೀಕೃತವಾಗಿದೆ. ಸಂಸ್ಕೃತಿ, ಶಿಕ್ಷಣ ಹಾಗೂ ಇತರೆ ಕ್ಷೇತ್ರಗಳಲ್ಲೂ ಸಹಕಾರ ವೃದ್ಧಿಸುವ ಕುರಿತು ಮಾತುಕತೆ ನಡೆಸಿದ್ದೇವೆ' ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಜಿ20 ಶೃಂಗದ ವೇಳೆ ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್, ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್, ಅಮೆರಿಕದ ಅಧ್ಯಕ್ಷ ಜೋ ಬೈಡನ್, ಸ್ಪೇನ್‌ನ ಅಧ್ಯಕ್ಷ ಪೆಡ್ರೊ ಸಂಖೇಜ್, ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೊಲ್ ಸೇರಿದಂತೆ ಇನ್ನಿತರ ಜಾಗತಿಕ ನಾಯಕರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.