ಕೀವ್: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಯುದ್ಧಪೀಡಿತ ಉಕ್ರೇನ್‌ಗೆ ಭೇಟಿ ನೀಡಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಬರಮಾಡಿಕೊಂಡರು. ಈ ವೇಳೆ ಪರಸ್ಪರ ಆಲಿಂಗನ ಮಾಡಿಕೊಂಡರು.
ಉಕ್ರೇನ್‌ನ ಕೀವ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದರು.
ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರಿಗೆ ಕೀವ್‌ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವರು ಸ್ವಾಗತ ಕೋರಿದರು.
ಮೋದಿ ಅವರು ಝೆಲೆನ್‌ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದು, ರಷ್ಯಾ-ಉಕ್ರೇನ್ ಸಂಘರ್ಷವನ್ನು ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಮಾತುಕತೆ ನಡೆಸುವ ಸಾಧ್ಯತೆಯಿದೆ. ಈ ಪ್ರದೇಶದಲ್ಲಿ ಶಾಂತಿ ಪುನಃಸ್ಥಾಪನೆಗೆ ಸಹಕಾರ ನೀಡುವ ಕುರಿತು ಮೋದಿ ಭರವಸೆ ನೀಡುವ ನಿರೀಕ್ಷೆಯಿದೆ.
ಸುಮಾರು 10 ತಾಸಿನ ರೈಲು ಪ್ರಯಾಣದ ನಂತರ ಪ್ರಧಾನಿ ಮೋದಿ ಅವರು ಉಕ್ರೇನ್ ರಾಜಧಾನಿಗೆ ತಲುಪಿದರು.
ನರೇಂದ್ರ ಮೋದಿ ಅವರು ಉಕ್ರೇನ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎನಿಸಿದ್ದಾರೆ. ಆರು ವಾರಗಳ ಹಿಂದೆಯಷ್ಟೇ ಮಾಸ್ಕೊಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ರಷ್ಯಾಕ್ಕೆ ಮೋದಿ ಭೇಟಿ ನೀಡಿರುವುದನ್ನು ಝೆಲೆನ್‌ಸ್ಕಿ ಟೀಕಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.