ಪೋರ್ಟ್ ಮೊರೆಸ್ಬಿ: ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಜಿಲೆಂಟ್ ಪ್ರಧಾನಿ ಕ್ರಿಸ್ ಹಿಪ್ಕಿನ್ಸ್ ಅವರನ್ನು ಸೋಮವಾರ ಭೇಟಿ ಮಾಡಿ ದ್ವಿಪಕ್ಷೀಯ ಒಪ್ಪಂದಗಳ ಕುರಿತು ಮಾತುಕತೆ ನಡೆಸಿದರು.
ವ್ಯಾಪಾರ, ವಾಣಿಜ್ಯ, ಶಿಕ್ಷಣ ಮತ್ತು ಕ್ರೀಡೆ, ತಂತ್ರಜ್ಞಾನ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ನೀಡುವುದಾಗಿ ಉಭಯ ನಾಯಕರು ತಿಳಿಸಿದರು.
ಭಾರತ ಮತ್ತು 14 ಪೆಸಿಫಿಕ್ ದ್ವೀಪರಾಷ್ಟ್ರಗಳ ನಡುವಣ ದ್ವಿಪಕ್ಷೀಯ ಸಂಬಂಧ ವೃದ್ಧಿ ಉದ್ದೇಶದ ಶೃಂಗದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಭಾನುವಾರ ಪಪುವಾ ನ್ಯೂಗಿನಿಗೆ ಬಂದಿದ್ದು, ಶೃಂಗದ ನಡುವೆ ಹಿಪ್ಕಿನ್ಸ್ ಅವರನ್ನು ಭೇಟಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.