ಪ್ಯಾರಿಸ್: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು, ಫ್ರಾನ್ಸ್‌ನ ರಾಷ್ಟ್ರೀಯ ದಿನಾಚರಣೆಯ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ್ದಾರೆ.
ಫ್ರಾನ್ಸ್‌ನ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ 'ಬಾಸ್ಟಿಲ್ ಡೇ ಪರೇಡ್'ನಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಭಾರತದ ಸಶಸ್ತ್ರ ಪಡೆಯು ಪಥಸಂಚಲನದಲ್ಲಿ ಭಾಗವಹಿಸುವ ಮೂಲಕ ನೆರೆದಿದ್ದವರನ್ನು ಆಕರ್ಷಿಸಿತು. ಫ್ರೆಂಚ್ ಜೆಟ್‌ಗಳೊಂದಿಗೆ ಭಾರತೀಯ ವಾಯುಪಡೆಯ (ಐಎಎಫ್) ರಫೇಲ್ ಫೈಟರ್ ಜೆಟ್ ಸಹ ಕಸರತ್ತು ನಡೆಸಿತು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ಭಾರತವು ಶತಮಾನದಷ್ಟು ಹಳೆಯದಾದ ಸಂಪ್ರದಾಯದಿಂದ ಪ್ರೇರಿತವಾಗಿದ್ದು, ಈ ಗ್ರಹವನ್ನು ಶಾಂತಿಯುತ, ಸಮೃದ್ಧ ಮತ್ತು ಸುಸ್ಥಿರವಾಗಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡಲು ಬದ್ಧವಾಗಿದೆ. ಫ್ರಾನ್ಸ್ ಬಲಿಷ್ಠ ಹಾಗೂ ವಿಶ್ವಾಸಾರ್ಹ ಮಿತ್ರ ರಾಷ್ಟ್ರವಾಗಿದ್ದುದ್ದಕ್ಕೆ 140 ಕೋಟಿ ಭಾರತೀಯರು ಸದಾ ಕೃತಜ್ಞರಾಗಿರುತ್ತಾರೆ. ಉಭಯ ದೇಶಗಳ ಬಾಂಧವ್ಯ ಮತ್ತಷ್ಟು ಸದೃಢವಾಗಲಿ ಎಂದು ಹೇಳಿದ್ದಾರೆ.
ವಿಶ್ವ ಇತಿಹಾಸದಲ್ಲಿ ಭಾರತವನ್ನು ದೈತ್ಯ ಹಾಗೂ ಸ್ನೇಹಿತ ಎಂದು ಬಣ್ಣಿಸಿರುವ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್, ಭವಿಷ್ಯದಲ್ಲಿ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದು, ಜುಲೈ 14ರ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾರತವನ್ನು ಸ್ವಾಗತಿಸಲು ಹೆಮ್ಮೆಪಟ್ಟುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.