ADVERTISEMENT

8 ಮಂದಿ ಭಾರತೀಯರ ಬಿಡುಗಡೆ: ಕತಾರ್‌ ದೊರೆಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ಪಿಟಿಐ
Published 15 ಫೆಬ್ರುವರಿ 2024, 12:44 IST
Last Updated 15 ಫೆಬ್ರುವರಿ 2024, 12:44 IST
<div class="paragraphs"><p>ಪ್ರಧಾನಿ ಮೋದಿ ಹಾಗೂ&nbsp;ಕತಾರ್ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ</p></div>

ಪ್ರಧಾನಿ ಮೋದಿ ಹಾಗೂ ಕತಾರ್ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ

   

ದೋಹಾ: 2022ರಲ್ಲಿ ಬಂಧಿಸಲಾಗಿದ್ದ ಭಾರತೀಯ ನೌಕಾಪಡೆಯ 8 ಮಂದಿ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಿದ್ದಕ್ಕಾಗಿ ಕತಾರ್ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಧನ್ಯವಾದ ಹೇಳಿದ್ದಾರೆ.

ಭಾರತೀಯ ಸಮುದಾಯ ಅಭಿವೃದ್ಧಿಗೆ ಅವರು ನೀಡಿದ ಬೆಂಬಲಕ್ಕಾಗಿ ಪ್ರಧಾನಮಂತ್ರಿ ಅವರು ದೊರೆ ಶೇಖ್ ತಮೀಮ್ ಅವರಿಗೆ ಧನ್ಯವಾದ ಅರ್ಪಿಸಿದರು ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಕರಣದ ಹಿನ್ನೆಲೆ:

2022ರಲ್ಲಿ ಬಂಧಿಸಲಾಗಿದ್ದ ಭಾರತೀಯ ನೌಕಾಪಡೆಯ 8 ಮಂದಿ ನಿವೃತ್ತ ಅಧಿಕಾರಿಗಳನ್ನು ಕತಾರ್ ಇತ್ತೀಚೆಗೆ ಬಿಡುಗಡೆ ಮಾಡಿದೆ. ಡಿಸೆಂಬರ್ 28 ರಂದು ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ನ್ಯಾಯಾಲಯ ತಡೆಹಿಡಿದಿತ್ತು.

ಇಸ್ರೇಲ್ ಪರವಾಗಿ ಅವರು ಬೇಹುಗಾರಿಕೆ ಮಾಡುತ್ತಿದ್ದರು ಎಂಬ ಆರೋಪದಡಿ ಕಳೆದ ಅಕ್ಟೋಬರ್‌ನಲ್ಲಿ ಕತಾರ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿತ್ತು ಎಂದು ಮೂಲಗಳು ತಿಳಿಸಿದ್ದವು. ಆದರೆ, ಅವರ ಮೇಲಿನ ಆರೋಪಗಳನ್ನು ಭಾರತ ಮತ್ತು ಕತಾರ್ ಖಚಿತಪಡಿಸಿಲ್ಲ.

ಕತಾರ್‌ನ ಖಾಸಗಿ ಕಂಪನಿಯೊಂದರಲ್ಲಿ ಜಲಾಂತರ್ಗಾಮಿ ನೌಕೆಗೆ ಸಂಬಂಧಿಸಿದ ಯೋಜನೆಗಾಗಿ ಈ 8 ಮಂದಿ ಕೆಲಸ ಮಾಡುತ್ತಿದ್ದರು. 2022ರಲ್ಲಿ ಅವರನ್ನು ಬೇಹುಗಾರಿಕೆ ಆರೋಪದಡಿ ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.