ಕೈರೊ: ಎರಡು ದಿನಗಳ ಈಜಿಪ್ಟ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೆಲಿಯೊಪೊಲಿಸ್ ಯುದ್ಧ ಸ್ಮಾರಕಕ್ಕೆ ತೆರಳಿ ಮೊದಲನೇ ಮಹಾಯುದ್ಧದಲ್ಲಿ ಪ್ರಾಣ ತೆತ್ತಿದ್ದ ಭಾರತೀಯ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ಹೆಲಿಯೊಪೊಲಿಸ್ ಯುದ್ಧ ಸ್ಮಾರಕದಲ್ಲಿ ಪುಷ್ಷ ನಮನ ಸಲ್ಲಿಸಿದ ಬಳಿಕ ಪ್ರಧಾನಿ ಮೋದಿ ಸಂದರ್ಶಕರ ಪುಸ್ತಕಕ್ಕೆ ಸಹಿ ಹಾಕಿದರು.
ಮೊದಲನೇ ಮಹಾಯುದ್ಧದಲ್ಲಿ ಈಜಿಪ್ಟ್ ಹಾಗೂ ಪ್ಯಾಲೆಸ್ಟೀನ್‌ನಲ್ಲಿ ಸುಮಾರು 4,000ಕ್ಕೂ ಹೆಚ್ಚು ಭಾರತೀಯ ಯೋಧರು ಬಲಿದಾನ ಮಾಡಿದ್ದಾರೆ.
ಈ ಸ್ಮಶಾನವು ಕಾಮನ್‌ವೆಲ್ತ್ ವಾರ್ ಗ್ರೇವ್ಸ್ ಕಮಿಷನ್‌ನ ನಿರ್ವಹಣೆಯಲ್ಲಿದೆ. ಹಲವು ದೇಶಗಳ ಯುದ್ಧ ಸ್ಮಾರಕಗಳನ್ನು ಇದು ಒಳಗೊಂಡಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಲ್ಲಿಗೆ ಭೇಟಿ ನೀಡಿ ಗೌರವ ಸಲ್ಲಿಸಿದ್ದರು.
ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಕೈರೊದಲ್ಲಿ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.