ನವದೆಹಲಿ: ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಉಕ್ರೇನ್ ಅಧ್ಯಕ್ಷ ವೊಲೊಡಿಯರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಜಪಾನ್ನ ಹಿರೋಶಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗ ಸಭೆಯ ವೇಳೆ ಉಭಯ ನಾಯಕರ ನಡುವೆ ಭೇಟಿ ನಡೆದಿದೆ.
ಈ ಸಂಬಂಧ ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಉಭಯ ನಾಯಕರ ಚಿತ್ರ ಹಂಚಿಕೊಂಡಿದೆ.
ಕಳೆದ ವರ್ಷದ ಫೆಬ್ರುವರಿಯಲ್ಲಿ ಉಕ್ರೇನ್ ಮೇಲೆ ರಷ್ಯಾದ ಸೇನಾ ಕಾರ್ಯಾಚರಣೆಯ ಬಳಿಕ ಈ ಇಬ್ಬರು ನಾಯಕರು ಇದೇ ಮೊದಲ ಬಾರಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.