ಹ್ಯೂಸ್ಟನ್:ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಶ್ಮೀರಿ ಪಂಡಿತರ ನಿಯೋಗ ಧನ್ಯವಾದ ಸಮರ್ಪಿಸಿದೆ.
‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಅಮೆರಿಕ ತಲುಪಿರುವ ಮೋದಿಯವರನ್ನು ಭೇಟಿ ಮಾಡಿದಪಂಡಿತರ ನಿಯೋಗವು ಮಾತುಕತೆ ನಡೆಸಿತು. ಈ ವೇಳೆ, ಸದಸ್ಯರೊಬ್ಬರು ‘7 ಲಕ್ಷ ಕಾಶ್ಮೀರಿ ಪಂಡಿತರ ಪರವಾಗಿ ನಿಮಗೆ ಧನ್ಯವಾದಗಳು’ ಎಂದು ಮೋದಿ ಬಳಿ ಹೇಳಿದರು.
ಕಾಶ್ಮೀರಿ ಪಂಡಿತರನ್ನು ವಾಪಸ್ ಕಳುಹಿಸುವ, ಆ ಪ್ರದೇಶವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಮುದಾಯದ ನಾಯಕರು, ತಜ್ಞರು, ಬಂಡವಾಳಗಾರರನ್ನು ಒಗ್ಗೂಡಿಸಲು ಗೃಹ ಸಚಿವಾಲಯದ ಅಧೀನದಲ್ಲಿ ಪಂಡಿತ ಸಮುದಾಯದ ಕಾರ್ಯಪಡೆಯೊಂದನ್ನು ರಚಿಸಬೇಕು ಎಂದೂ ನಿಯೋಗ ಮನವಿ ಸಲ್ಲಿಸಿತು.
ಬಹುನಿರೀಕ್ಷಿತ ‘ಹೌಡಿ ಮೋದಿ!’ ಕಾರ್ಯಕ್ರಮ ಭಾರತೀಯ ಕಾಲಮಾನ ಪ್ರಕಾರ ಇಂದು ರಾತ್ರಿ ನಡೆಯಲಿದೆ.ಕಾರ್ಯಕ್ರಮದಲ್ಲಿ 50 ಸಾವಿರ ಭಾರತೀಯ ಅಮೆರಿಕನ್ನರು ಭಾಗವಹಿಸುವ ನಿರೀಕ್ಷೆಯಿದೆ.ಪೋಪ್ ಹೊರತುಪಡಿಸಿ ವಿದೇಶದ ಯಾವುದೇ ಚುನಾಯಿತ ಪ್ರತಿನಿಧಿ ಭಾಗವಹಿಸಲಿರುವ ಸಭೆಯಲ್ಲಿ ಸೇರುತ್ತಿರುವ ಅತ್ಯಧಿಕ ಪ್ರೇಕ್ಷಕರ ಸಂಖ್ಯೆ ಇದಾಗಲಿದೆ.
ಇದನ್ನೂ ಓದಿ:ಹ್ಯೂಸ್ಟನ್: ಬಹುನಿರೀಕ್ಷಿತ ‘ಹೌಡಿ ಮೋದಿ’ ಇಂದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.