ADVERTISEMENT

ಉಗ್ರವಾದ ಪೋಷಿಸುವ ದೇಶಗಳಿಗೂ ಅದರಿಂದ ಅಪಾಯವಿದೆ: ಪಾಕ್ ಬಗ್ಗೆ ಪ್ರಧಾನಿ ಮೋದಿ

ಪಿಟಿಐ
Published 25 ಸೆಪ್ಟೆಂಬರ್ 2021, 16:13 IST
Last Updated 25 ಸೆಪ್ಟೆಂಬರ್ 2021, 16:13 IST
ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (ಎಪಿ ಚಿತ್ರ)
ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (ಎಪಿ ಚಿತ್ರ)   

ವಾಷಿಂಗ್ಟನ್: ಭಯೋತ್ಪಾದನೆಯನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿರುವ ದೇಶಗಳು ತಮಗೂ ಅದು ಬೆದರಿಕೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನದಲ್ಲಿ ಮಾತನಾಡಿದ ಅವರು, ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿರುವ ನೆರೆ ರಾಷ್ಟ್ರ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗತ್ತು ತೀವ್ರವಾದದ ಬೆದರಿಕೆಯನ್ನು ಎದುರಿಸುತ್ತಿದೆ. ಅಫ್ಗಾನಿಸ್ತಾನವನ್ನು ಭಯೋತ್ಪಾದನೆ ಹರಡಲು ಮತ್ತು ಉಗ್ರ ಚಟುವಟಿಕೆಗಳಿಗೆ ಬಳಸಿಕೊಳ್ಳದಂತೆ ನೋಡಿಕೊಳ್ಳಬೇಕಿದೆ. ಅಫ್ಗಾನಿಸ್ತಾನದ ಸೂಕ್ಷ್ಮ ಪರಿಸ್ಥಿತಿಯ ಲಾಭವನ್ನು ಪಡೆಯಲು ಮತ್ತು ಅದನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳಲು ಯಾವುದೇ ದೇಶವು ಯತ್ನಿಸದಂತೆ ನಾವು ಖಾತರಿಪಡಿಸಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನವು ಉಗ್ರರಿಗೆ ಸುರಕ್ಷಿತ ಸ್ವರ್ಗವಾಗಿದೆ ಎಂದು ಅಫ್ಗಾನಿಸ್ತಾನವೂ ಸೇರಿದಂತೆ ಭಾರತ, ಅಮೆರಿಕ ಹಿಂದಿನಿಂದಲೂ ಆರೋಪಿಸುತ್ತಾ ಬಂದಿವೆ. ಆದರೆ ಇದನ್ನು ಪಾಕಿಸ್ತಾನ ನಿರಾಕರಿಸುತ್ತಲೇ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.