ಜಿನೀವಾ: ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಗಿಲ್ಗಿಟ್–ಬಾಲ್ಟಿಸ್ತಾನದ ರಾಜಕೀಯ ಹೋರಾಟಗಾರರು ಸ್ವಿಜರ್ಲೆಂಡ್‌ನ ಜಿನೀವಾದಲ್ಲಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ ಕಚೇರಿ ಎದುರು ಪಾಕಿಸ್ತಾನದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ನಿರ್ಮೂಲನೆಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅಲ್ಲದೆ, ಪಾಕಿಸ್ತಾನ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ‘ಎಎನ್‌ಐ’ ವರದಿ ಮಾಡಿದೆ.
‘ಯುನೈಟೆಡ್ ಕಾಶ್ಮೀರ್ ಪೀಪಲ್ಸ್ ನ್ಯಾಷನಲ್ ಪಾರ್ಟಿ’, ‘ಸ್ವಿಸ್ ಕಾಶ್ಮೀರ್ ಹ್ಯೂಮನ್ ರೈಟ್ಸ್ ಆ್ಯಂಡ್ ಜಮ್ಮು–ಕಾಶ್ಮೀರ್ ಇಂಟರ್‌ನ್ಯಾಷನಲ್ ಪೀಪಲ್ಸ್ ಅಲಯನ್ಸ್’ಗಳು ಮಾನವಹಕ್ಕುಗಳ ಮಂಡಳಿಯ 48ನೇ ಅಧಿವೇಶನದ ಸಂದರ್ಭದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.