ADVERTISEMENT

ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ಕೋವಿಡ್ ದೃಢ

ಪಿಟಿಐ
Published 18 ಜುಲೈ 2024, 1:49 IST
Last Updated 18 ಜುಲೈ 2024, 1:49 IST
<div class="paragraphs"><p>ಜೋ ಬೈಡನ್</p></div>

ಜೋ ಬೈಡನ್

   

(ರಾಯಿಟರ್ಸ್ ಚಿತ್ರ)

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರಿಗೆ ಕೋವಿಡ್-19 ದೃಢಪಟ್ಟಿದೆ.

ADVERTISEMENT

ಈ ಕುರಿತು ಶ್ವೇತಭವನ ಮಾಹಿತಿ ನೀಡಿದ್ದು, ಜೋ ಬೈಡನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ತಿಳಿಸಿದೆ.

ಲಾಸ್ ವೇಗಾಸ್‌ನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಬೈಡನ್ ಅವರಿಗೆ ಕೋವಿಡ್ ದೃಢಪಟ್ಟಿದೆ. ಅವರು ಲಸಿಕೆ ಪಡೆದಿದ್ದಾರೆ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ತಿಳಿಸಿದ್ದಾರೆ.

ಬೈಡನ್ ಡೆಲವೇರ್‌‌ಗೆ ಹಿಂತಿರುಗಿ ಅವರ ನಿವಾಸದಲ್ಲಿ ಪ್ರತ್ಯೇಕ ವಾಸದಲ್ಲಿ ಇರಲಿದ್ದಾರೆ. ಈ ವೇಳೆ ತಮ್ಮ ಕರ್ತವ್ಯವನ್ನು ನಿಭಾಯಿಸಲಿದ್ದಾರೆ. ಬೈಡನ್ ಅವರ ಆರೋಗ್ಯ ಸ್ಥಿತಿಯ ಕುರಿತು ಶ್ವೇತಭವನ ಮಾಹಿತಿ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬುಧವಾರ ಸಂಜೆ ಲಾಸ್ ವೇಗಾಸ್‌ನಲ್ಲಿ ಮತ್ತೊಂದು ಕಾರ್ಯಕ್ರಮದಲ್ಲಿ ಬೈಡನ್ ಭಾಷಣ ನಿಗದಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.