ಲಂಡನ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೂರು ದಿನದ ಭೇಟಿಗಾಗಿ ಶನಿವಾರ ಇಲ್ಲಿಗೆ ಆಗಮಿಸಿದ್ದು, ಸೋಮವಾರ ರಾಣಿ ಎಲಿಜಬೆತ್ 2 ಅವರ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅಂತ್ಯಕ್ರಿಯೆಯು ವೆಸ್ಟ್‌ಮಿನಿಸ್ಟರ್ ಅಬೆಯಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 11ಕ್ಕೆ ನಡೆಯಲಿದೆ. ಭಾರತ ಸರ್ಕಾರದ ಪರವಾಗಿ ರಾಷ್ಟ್ರಪತಿ ಅವರು ಗೌರವ ನಮನ ಸಲ್ಲಿಸಲಿದ್ದಾರೆ.
ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಮೆರಿಕ ಅಧ್ಯಕ್ಷ ಜೋ ಬೈಡನ್, ವಿವಿಧ ರಾಷ್ಟ್ರಗಳ ಪ್ರಮುಖರು ಸೇರಿ 500ಕ್ಕೂ ಹೆಚ್ಚು ನಾಯಕರು ಆಗಮಿಸಿದ್ದಾರೆ. 2000ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ.
ರಾಷ್ಟ್ರಪತಿ ಭೇಟಿ ಕುರಿತಂತೆ ಅವರ ಕಾರ್ಯಾಲಯವು ಟ್ವೀಟ್ ಮಾಡಿದೆ. ಬ್ರಿಟನ್ ಸರ್ಕಾರದ ಪರವಾಗಿ ನಡೆಯುತ್ತಿರುವ ಈ ಅಧಿಕೃತ ಕಾರ್ಯಕ್ರಮದಲ್ಲಿ ವಿವಿಧ ರಾಷ್ಟ್ರಗಳ ಪ್ರಮುಖರು ಭಾಗವಹಿಸುವರು.
ವೆಸ್ಟ್ ಮಿನಿಸ್ಟರ್ ಸಭಾಂಗಣದಲ್ಲಿ ರಾಣಿಯ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದ ರಾಷ್ಟ್ರಪತಿ ಅವರು ಬಳಿಕ ಸಂತಾಪ ಸೂಚಕ ಕಡತದಲ್ಲಿ ಸಹಿಯನ್ನು ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.