ಲಂಡನ್: ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್‌ನ ವೆಸ್ಟ್‌ಮಿನ್‌ಸ್ಟರ್ ಹಾಲ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಭೇಟಿ ನೀಡಿದರು.
ಮುರ್ಮು ಅವರು ತಮ್ಮ ಪರವಾಗಿ ಮತ್ತು ಭಾರತದ ನಾಗರಿಕರ ಪರವಾಗಿ ರಾಣಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಟ್ವೀಟ್ ಮಾಡಿ ಮಾಹಿತಿ ನೀಡಿದೆ.
ರಾಣಿಯವರ ಸ್ಮರಣೆಗಾಗಿ ಲಂಡನ್‌ನ ಲ್ಯಾಂಕಾಸ್ಟರ್ ಹೌಸ್‌ನಲ್ಲಿ ಇರಿಸಲಾಗಿರುವ ಸಂತಾಪ ಸೂಚಕ ಪುಸ್ತಕಕ್ಕೂ ರಾಷ್ಟ್ರಪತಿಯವರು ಸಹಿ ಹಾಕಿದರು.
ಬ್ರಿಟನ್‌ನ ರಾಣಿ, 96 ವರ್ಷ ವಯಸ್ಸಿನ 2ನೇ ಎಲಿಜಬೆತ್ ಸೆ.8ರ ರಾತ್ರಿ ನಿಧನರಾದರು. ಬ್ರಿಟಿಷ್ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ ಹಿರಿಮೆ ಅವರದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.