ಮಾಸ್ಕೊ: ಜಾಗತಿಕ ಬೆಳವಣಿಗೆಗಳು ಹಾಗೂ ದ್ವಿಪಕ್ಷೀಯ ಸಂಬಂಧದ ಕುರಿತು ಚರ್ಚಿಸಲು ಮುಂದಿನ ವರ್ಷ ದೇಶಕ್ಕೆ ಆಗಮಿಸುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಹ್ವಾನ ನೀಡಿದ್ದಾರೆ.
ರಷ್ಯಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್‌ನಲ್ಲಿ ಮಾತನಾಡಿರುವ ಪುಟಿನ್, 'ನಮ್ಮ ಮಿತ್ರ ನರೇಂದ್ರ ಮೋದಿ ಅವರನ್ನು ರಷ್ಯಾದಲ್ಲಿ ನೋಡಲು ಹರ್ಷಿಸುತ್ತೇವೆ' ಎಂದು ತಿಳಿಸಿದ್ದಾರೆ.
ಇದೇ ವೇಳೆ ಅವರು, 'ಮೋದಿ ಭೇಟಿ ವೇಳೆ ಜಾಗತಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಬಹುದು. ಭಾರತ ಮತ್ತು ರಷ್ಯಾ ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಾತುಕತೆ ನಡೆಸಬಹುದು. ಮಾಡಬೇಕಿರುವ ಕೆಲಸಗಳು ಸಾಕಷ್ಟಿವೆ' ಎಂದು ಹೇಳಿರುವುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಮೋದಿ ಅವರಿಗೆ ಶುಭಾಶಯ ತಿಳಿಸುವಂತೆ ಮತ್ತು ರಷ್ಯಾಕ್ಕೆ ಬರಲು ತಾವು ನೀಡುತ್ತಿರುವ ಆಹ್ವಾನ ರವಾನಿಸುವಂತೆಯೂ ಜೈಶಂಕರ್‌ಗೆ ಪುಟಿನ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.