ಬೀಜಿಂಗ್: ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಇದೇ 22ರಂದು ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.
ದಕ್ಷಿಣ ಆಫ್ರಿಕಾದ ಜೊಹಾನಸ್‌ಬರ್ಗ್‌ನಲ್ಲಿ ಆ.21ರಿಂದ 24ರವರೆಗೆ ನಡೆಯಲಿರುವ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಷಿ ಜಿನ್‌ಪಿಂಗ್ ಭಾಗವಹಿಸಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್‌ಯಿಂಗ್ ಖಚಿತಪಡಿಸಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಇದೇ 22ರಂದು ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ದಕ್ಷಿಣ ಆಫ್ರಿಕಾ ಸರ್ಕಾರ ತಿಳಿಸಿದ್ದು, ಭಾರತದ ನಾಯಕ ಸಭೆಯಲ್ಲಿ ಭಾಗಿಯಾಗಲ್ಲ ಎಂದು ಕೆಲ ಮಾಧ್ಯಮಗಳು ವರದಿ ಮಾಡಿರುವುದನ್ನು ಇದೇ ಸಂದರ್ಭ ಅಲ್ಲಗಳೆದಿತ್ತು.
‘ಬ್ರಿಕ್ಸ್‌ನ 15ನೇ ಆವೃತ್ತಿಯ ಶೃಂಗಸಭೆಗೆ ಸಕಲ ತಯಾರಿ ನಡೆದಿದೆ. ಬ್ರೆಜಿಲ್, ಚೀನಾ, ಭಾರತ ಸೇರಿದಂತೆ ಆತಿಥೇಯ ದಕ್ಷಿಣ ಆಫ್ರಿಕಾದ ನಾಯಕರು ಈ ಸಭೆಯಲ್ಲಿ ಭಾಗಿಯಾಗಿ ಹಲವು ವಿಷಯಗಳ ಚರ್ಚೆ ನಡೆಸಲಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವರ್ಚುವಲ್ ಆಗಿ ಪಾಲ್ಗೊಳ್ಳಲಿದ್ದಾರೆ’ ಎಂದು ದಕ್ಷಿಣ ಆಫ್ರಿಕಾದ ಅಂತರರಾಷ್ಟ್ರೀಯ ಸಂಬಂಧಗಳು ಹಾಗೂ ಸಹಕಾರ ಸಚಿವ ನಲೆಡಿ ಪಂಡೊರ್ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.