ಕೊಲಂಬೊ:ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶದ ಕಟ್ಟೆ ಒಡೆದಿದೆ.ರಾನಿಲ್ ವಿಕ್ರಮಸಿಂಘೆ ಅವರು ಶನಿವಾರ ಪ್ರಧಾನಿ ಸ್ಥಾನಕ್ಕೆರಾಜೀನಾಮೆ ನೀಡಿದ ಬೆನ್ನಲ್ಲೇ,ಉದ್ರಿಕ್ತರ ಗುಂಪು ಅವರ ನಿವಾಸದ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ನಾಗರಿಕರ ಸುರಕ್ಷತೆ ಮತ್ತು ಸರ್ವ ಪಕ್ಷಗಳ ಸರ್ಕಾರಕ್ಕೆ ದಾರಿ ಮಾಡಿಕೊಡುವ ಉದ್ದೇಶದಿಂದ ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ಅಂಗೀಕರಿಸುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ರಾನಿಲ್ ವಿಕ್ರಮಸಿಂಘೆ ಹೇಳಿದ್ದರು.
ಇದಕ್ಕೂ ಮುನ್ನಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆ ನೀಡುವಂತೆ ಒತ್ತಾಯಿಸಿ, ಅವರ ಗೃಹಕಚೇರಿಗೆ ಪ್ರತಿಭಟನಕಾರರು ನುಗ್ಗಿದ್ದು, ದಾಂಧಲೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.