ADVERTISEMENT

ಕೆನ್ಯಾದಲ್ಲಿ ಪ್ರತಿಭಟನೆ: ಭಾರತೀಯರು ಎಚ್ಚರಿಕೆವಹಿಸಲು ಹೈಕಮೀಷನ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 6:16 IST
Last Updated 26 ಜೂನ್ 2024, 6:16 IST
<div class="paragraphs"><p>ಹೊಸ ತೆರಿಗೆಗಳನ್ನು ವಿರೋಧಿಸಿ ಕೆನ್ಯಾ ರಾಜಧಾನಿ ನೈರೋಬಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಚದುರಿಸಲು ಪೊಲೀಸರು ಮಂಗಳವಾರ ಗಾಳಿಯಲ್ಲಿ ಗುಂಡು ಹಾರಿಸಿದರು </p></div>

ಹೊಸ ತೆರಿಗೆಗಳನ್ನು ವಿರೋಧಿಸಿ ಕೆನ್ಯಾ ರಾಜಧಾನಿ ನೈರೋಬಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಚದುರಿಸಲು ಪೊಲೀಸರು ಮಂಗಳವಾರ ಗಾಳಿಯಲ್ಲಿ ಗುಂಡು ಹಾರಿಸಿದರು

   

ನೈರೋಬಿ: ಹೊಸ ತೆರಿಗೆ ಹಾಗೂ ವಿವಾದಾತ್ಮಕ ಹಣಕಾಸು ಮಸೂದೆ ವಿರೋಧಿಸಿ ಕೆನ್ಯಾದಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತೀಯರು ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ ಹೈಕಮೀಷನ್‌ ಸಲಹೆ ಮಾಡಿದೆ.

ಕೆನ್ಯಾದಲ್ಲಿ ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಹಿಂಸಾಚಾರ ಹೆಚ್ಚಾಗುತ್ತಿದೆ, ಪರಿಸ್ಥಿತಿ ಉದ್ವಿಗ್ನವಾಗಿದ್ದು ಭಾರತೀಯರು ಜಾಗರೂಕರಾಗಿರಬೇಕು. ಅನಾವಶ್ಯಕವಾಗಿ ಹೊರಗೆ ಹೋಗಬಾರದು, ಪ್ರತಿಭಟನೆ ಸ್ಥಳಗಳಲ್ಲಿ ಇರದಂತೆ ಜಾಗ್ರತೆವಹಿಸಬೇಕು ಎಂದು ಸಲಹೆ ಮಾಡಿದೆ.

ADVERTISEMENT

ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಇಲ್ಲಿಯವರೆಗೂ ಏಳು ಜನರು ಮೃತಪಟ್ಟು 31ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಸ್ಯಾನಿಟರಿ ಟವೆಲ್‌ ಮತ್ತು ಡಯಪರ್ಸ್‌ಗಳ ಮೇಲಿನ ತೆರಿಗೆ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ. ಇದರ ಜೊತೆಗೆ ಇನ್ನೂ ಹಲವು ಸರಕುಗಳ ಮೇಲಿನ ತೆರಿಗೆ ಹೆಚ್ಚಳಕ್ಕೆ ಅನುವು ಮಾಡಿಕೊಡುವ ಹಣಕಾಸು ಮಸೂದೆ ಮೇಲೆ ಸಂಸತ್‌ನಲ್ಲಿ ಚರ್ಚೆ ನಡೆದಿದ್ದು, ಮಸೂದೆಯನ್ನು ಮತಕ್ಕೆ ಹಾಕಲಾಗಿದೆ.

ಪ್ರಸ್ತಾವಿತ ತೆರಿಗೆಗಳನ್ನು ವಿರೋಧಿಸಿ ಕಳೆದ ಕೆಲ ದಿನಗಳಿಂದಲೂ ಇಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.