ಮಾಸ್ಕೊ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರ ಬೆಂಬಲಿಗರ ಹೇಳಿಕೆಯನ್ನು ಉಲ್ಲೇಖಿಸಿ ರಷ್ಯಾ ಮಾಧ್ಯಮಗಳು ಶನಿವಾರ ವರದಿ ಮಾಡಿವೆ.
ಸುಮಾರು 700 ರಾಜಕಾರಣಿಗಳು, ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯರನ್ನು ಒಳಗೊಂಡ ಗುಂಪು ಶನಿವಾರ ಮಾಸ್ಕೊದಲ್ಲಿ ಸಭೆ ನಡೆಸಿ, ಪುಟಿನ್ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ತೀರ್ಮಾನವನ್ನು ಸರ್ವಾನುಮತದಿಂದ ಬೆಂಬಲಿಸಿತು ಎಂದು ವರದಿಯಲ್ಲಿ ಹೇಳಲಾಗಿದೆ.
‘ಆಡಳಿತಾರೂಢ ಯುನೈಟೆಡ್ ರಷ್ಯಾ (ಯುಆರ್) ಪಕ್ಷದ ಸಂಪೂರ್ಣ ಬೆಂಬಲವಿದ್ದರೂ, ಪಕ್ಷೇತರ ಅಭ್ಯರ್ಥಿಯಾಗಿ ಪುಟಿನ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ’ ಎಂದು ಪಕ್ಷದ ಹಿರಿಯ ನಾಯಕ ಆ್ಯಂಡ್ರೆ ಟುರ್ಚಾಂಕ್ ತಿಳಿಸಿದ್ದಾರೆ.
ಪುಟಿನ್, ಕಳೆದ ಎರಡು ದಶಕಗಳಿಂದ ಅಧ್ಯಕ್ಷ ಅಥವಾ ಪ್ರಧಾನಿಯಾಗಿ ಅಧಿಕಾರದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.