ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರುವ ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು, ಹಾರ್ವರ್ಡ್ ವಿಶ್ವವಿದ್ಯಾಲಯದ ಆವರಣದಲ್ಲಿ ಮಾಡಬೇಕಿದ್ದ ಭಾಷಣವನ್ನು ರದ್ದುಪಡಿಸಿದ್ದಾರೆ.
ಹಾರ್ವರ್ಡ್ ವಿಶ್ವವಿದ್ಯಾಲಯದ ಅಲ್ಮಾ ಮಥರ್‌ನಲ್ಲಿ ಕಮಲಾ ಭಾಷಣ ಮಾಡಬೇಕಿತ್ತು.
ಚುನಾವಣೆ ವೇಳೆ ಕಮಲಾ ಅವರ ಪ್ರಚಾರದ ಉಸ್ತುವಾರಿ ನೋಡಿಕೊಂಡಿದ್ದವರಲ್ಲಿ ಒಬ್ಬರಾದ ಕೆಡ್ರಿಕ್ ರಿಚ್‌ಮಂಡ್ ಕಾರ್ಯಕ್ರಮವನ್ನುದ್ದೇಶಿಸಿ ಮಾತು ಮುಗಿಸುತ್ತಿದ್ದಂತೆಯೇ, ಅಭಿಮಾನಿಗಳು ಸ್ಥಳದಿಂದ ತೆರಳಿದ್ದಾರೆ.
ಗೆಲುವಿನ ಸನಿಹ ಹೆಜ್ಜೆ ಇಟ್ಟಿರುವ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಅವರು ತಮ್ಮ ಬೆಂಬಲಿಗರನ್ನುದ್ದೇಶಿಸಿ ಫ್ಲೋರಿಡಾದಲ್ಲಿ ಮಾತನಾಡಲು ಸಜ್ಜಾಗಿದ್ದಾರೆ.
ಅಮೆರಿಕದಾದ್ಯಂತ ಮಂಗಳವಾರ ಮತದಾನ ನಡೆದಿತ್ತು. ಇಂದು ಎಣಿಕೆ ನಡೆಯುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಟ್ರಂಪ್ ಅವರು ಕಮಲಾ ಎದುರು 248–214 ಅಂತರದ ಮುನ್ನಡೆಯಲ್ಲಿದ್ದಾರೆ. ಸರ್ಕಾರ ರಚನೆಗೆ 270 ಸ್ಥಾನಗಳು ಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.