ಡಬ್ಲಿನ್: ಐರ್ಲೆಂಡ್ ರಾಜಧಾನಿ ಡಬ್ಲಿನ್‌ನಲ್ಲಿ ಶಾಲೆಯೊಂದರ ಹೊರಭಾಗದಲ್ಲಿ ಮೂವರು ಮಕ್ಕಳಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಇದರಿಂದಾಗಿ ಘಟನಾ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ಡಬ್ಲಿನ್‌ನ ಪಾರ್ನೆಲ್ ಸ್ಕ್ವೇರ್ ಈಸ್ಟ್ನಲ್ಲಿ ಘಟನೆ ನಡೆದಿದ್ದು, ಇಬ್ಬರು ಮಕ್ಕಳು ಮತ್ತು ಇಬ್ಬರು ವಯಸ್ಕರು ಗಾಯಗೊಂಡಿದ್ದಾರೆ. ಆ ಪೈಕಿ 5 ವರ್ಷದ ಬಾಲಕಿ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾಲೆಯ ಮುಂಭಾಗ ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಉದ್ರಿಕ್ತರು ಕಾನ್ನೆಲ್ ಸೇತುವೆ ಬಳಿ ಕಾರುಗಳು ಹಾಗೂ ಬಸ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಜತೆಗೆ ಸಮೀಪದ ಅಂಗಡಿಗಳಿಗೆ ನುಗ್ಗಿ ವಸ್ತುಗಳನ್ನು ದೋಚಿದ್ದಾರೆ. ಘಟನೆಯ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೆ, ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಶಂಕಿತ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.