ಕೀವ್ : ‘ನಮ್ಮ ಹಿಡಿತದಲ್ಲಿರುವ ಪೂರ್ವ ಉಕ್ರೇನ್ ಪ್ರದೇಶದಲ್ಲಿನ ಆಸ್ಪತ್ರೆಯೊಂದರ ಮೇಲೆ ಉಕ್ರೇನ್‌ನ ಸೈನಿಕರು ಉದ್ದೇಶಪೂರ್ವಕವಾಗಿ ದಾಳಿ ನಡೆಸಿ 14 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 24 ಮಂದಿ ಗಾಯಗೊಂಡಿದ್ದಾರೆ’ ಎಂದು ರಷ್ಯಾ ಶನಿವಾರ ಆರೋಪಿಸಿದೆ.
‘ನೊವಾಯ್ಡರ್‌ನಲ್ಲಿರುವ ಆಸ್ಪತ್ರೆ ಮೇಲೆ ಉಕ್ರೇನ್ ಯೋಧರು ಕ್ಷಿಪಣಿ ದಾಳಿ ನಡೆಸಿದ್ದಾರೆ. ಇದು ಅತ್ಯಂತ ಗಂಭೀರವಾದ ಯುದ್ಧ ಅಪರಾಧ ಎಂಬುದರಲ್ಲಿ ಅನುಮಾನವೇ ಇಲ್ಲ’ ಎಂದು ರಷ್ಯಾದ ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.
‘ಈ ಕೃತ್ಯಕ್ಕಾಗಿ ಯೋಜನೆ ರೂಪಿಸಿರುವವರು ಹಾಗೂ ಇದನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದವರನ್ನು ಪತ್ತೆಹಚ್ಚಲಾಗುತ್ತದೆ. ಅವರಿಗೆ ತಕ್ಕ ಶಿಕ್ಷೆ ಆಗಲಿದೆ’ ಎಂದು ಹೇಳಿದೆ.
ರಷ್ಯಾದ ಆರೋಪದ ಕುರಿತು ಉಕ್ರೇನ್ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.