ದಕ್ಷಿಣ ಉಕ್ರೇನ್‌ನ ಮರಿಯಪೋಲ್‌ನಲ್ಲಿರುವ ಅಜೋವ್‌ಸ್ಟಾಲ್ ಉಕ್ಕಿನ ಘಟಕದಲ್ಲಿ ಸಿಲುಕಿರುವ ನಾಗರಿಕರ ಸ್ಥಳಾಂತರಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್ ಒಪ್ಪಿಗೆ ನೀಡಿದ್ದಾರೆ.
ವಿಶ್ವಸಂಸ್ಥೆ ಮತ್ತು ರೆಡ್ ಕ್ರಾಸ್‌ನ ಅಂತರರಾಷ್ಟ್ರೀಯ ಸಮಿತಿ ಸಹಯೋಗದಲ್ಲಿ ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ವಿಶ್ವಸಂಸ್ಥೆ ಮಂಗಳವಾರ ತಿಳಿಸಿದೆ.
ರಷ್ಯಾದ ಮಾಸ್ಕೋದಲ್ಲಿ ಪುಟಿನ್ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ಸಭೆ ನಡೆಸಿದ್ದು, ನಾಗರಿಕರ ಸ್ಥಳಾಂತರಕ್ಕೆ ಪುಟಿನ್ ಸಮ್ಮತಿಸಿದ್ದಾರೆ ಎಂದು ಹೇಳಿದ್ದಾರೆ.
ಸಭೆಯ ಬಳಿಕ ವಿಶ್ವಸಂಸ್ಥೆಯ ವಕ್ತಾರ ಸ್ಟೀಫನ್ ಡ್ಯೂರಿಕ್ ಅವರು ಹೇಳಿಕೆ ನೀಡಿದ್ದು, ರಷ್ಯಾ ರಕ್ಷಣಾ ಸಚಿವಾಲಯದ ಸಮ್ಮತಿಯೊಂದಿಗೆ, ಅಜೋವ್‌ಸ್ಟಾಲ್ ಉಕ್ಕಿನ ಘಟಕದಿಂದ ಜನರನ್ನು ಸ್ಥಳಾಂತರಿಸಲಾಗುತ್ತದೆ. ರಕ್ಷಣಾ ಕಾರ್ಯಕ್ಕೆ ರಷ್ಯಾ ಪಡೆಗಳು ಅಡ್ಡಿಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.