ಯುದ್ದ ಪೀಡಿತ ಉಕ್ರೇನ್‌ಗೆ ಶಸ್ತ್ರಾಸ್ತ್ರ ಪೂರೈಸುವ ವಿಚಾರವಾಗಿ ಐರೋಪ್ಯ ಒಕ್ಕೂಟ ರಾಷ್ಟ್ರಗಳ ರಕ್ಷಣಾ ಸಚಿವರು ಸೋಮವಾರ ಸಭೆ(ವರ್ಚುವಲ್) ಸೇರಲಿದ್ದಾರೆ ಎಂದು ಸುದ್ದಿಸಂಸ್ಥೆ ‘ರಾಯಿಟರ್ಸ್‘ ವರದಿ ಮಾಡಿದೆ.
ಉಕ್ರೇನ್‌ಗೆ ಜಂಟಿಯಾಗಿ ಮಿಲಿಟರಿ ಹಾಗೂ ಆರ್ಥಿಕ ನೆರವು ನೀಡಲು ನಿರ್ಧರಿಸಲಾಗಿದೆ. ಈ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಐರೋಪ್ಯ ಒಕ್ಕೂಟದ ವಿದೇಶಾಂಗ ನೀತಿ ಮುಖ್ಯಸ್ಥ ಜೋಸೆಪ್ ಬೊರೆಲ್ ತಿಳಿಸಿದ್ದಾರೆ.
ಉಕ್ರೇನ್‌ಗೆ ಹೆಚ್ಚಿನ ತುರ್ತು ಅವಶ್ಯಕತೆಗಳನ್ನು ಪೂರೈಸುವುದರ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಬೊರೆಲ್ ಹೇಳಿದ್ದಾರೆ.
ರಷ್ಯಾದ ಮೇಲಿನ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವುದಾಗಿ ಐರೋಪ್ಯ ಒಕ್ಕೂಟ ಭಾನುವಾರ ಘೋಷಿಸಿದೆ.
ರಷ್ಯಾ ನಡೆಸುತ್ತಿರುವ ಆಕ್ರಮಣದಿಂದಾಗಿ ದೇಶದಲ್ಲಿ 14 ಮಕ್ಕಳು ಸೇರಿದಂತೆ ಒಟ್ಟು 352 ನಾಗರಿಕರು ಇದುವರೆಗೆ ಮೃತಪಟ್ಟಿದ್ದಾರೆ. 116 ಮಕ್ಕಳು ಮತ್ತು 1,684 ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಆಂತರಿಕ ಸಚಿವಾಲಯ ತಿಳಿಸಿದೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.