ನ್ಯೂಯಾರ್ಕ್:ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆಖಾಯಂ ಸದಸ್ಯತ್ವ ಸಿಗಬೇಕು ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದಾರೆ.
ವಿಶ್ವಸಂಸ್ಥೆಯ 77ನೇ ಸಾಮಾನ್ಯ ಸಭೆಯಲ್ಲಿ ಮಾತನಾಡಿರುವಸೆರ್ಗೆ, 'ಆಫ್ರಿಕಾ, ಏಷ್ಯಾ ಮತ್ತು ಲ್ಯಾಟಿನ್ ಅಮೆರಿಕದ ರಾಷ್ಟ್ರಗಳನ್ನೂ ಸೇರಿಸಿಕೊಳ್ಳುವ ಮೂಲಕ ಭದ್ರತಾ ಮಂಡಳಿಯನ್ನು ಮತ್ತಷ್ಟು ಪ್ರಜಾಸತ್ತಾತ್ಮಕವಾಗಿಸುವುದನ್ನು ನಿರೀಕ್ಷಿಸುತ್ತೇವೆ. ಮುಖ್ಯವಾಗಿ ಭಾರತ ಮತ್ತು ಬ್ರೆಜಿಲ್ ಪ್ರಮುಖ ರಾಷ್ಟ್ರಗಳಾಗಿದ್ದು, ಮಂಡಳಿಯಖಾಯಂ ಸದಸ್ಯತ್ವಕ್ಕೆ ಪರಿಗಣಿಸಬೇಕು' ಎಂದು ಪ್ರತಿಪಾದಿಸಿದ್ದಾರೆ.
ಇದೇ ವೇಳೆ ಅವರು ಉಕ್ರೇನ್‌ನಲ್ಲಿರಷ್ಯಾ ನಡೆಸುತ್ತಿರುವ ಸೇನಾ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕಾರ್ಯಾಚರಣೆಯನ್ನು ಜನಾಭಿಪ್ರಾಯ ಸಂಗ್ರಹ ಎಂದು ಹೇಳಿಕೊಂಡಿದ್ವಾರೆ.
ಪಾಶ್ಚಿಮಾತ್ಯ ರಾಷ್ಟ್ರಗಳು ಜನಾಭಿಪ್ರಾಯ ಸಂಗ್ರಹದ ವಿರುದ್ಧ 'ದ್ವೇಷ ಹರಡುವ' ಮೂಲಕ, ರಷ್ಯಾ ನಿಯಂತ್ರಣದಲ್ಲಿರುವ ಉಕ್ರೇನ್ ಭೂಭಾಗವನ್ನು ತಮ್ಮ ಒಕ್ಕೂಟದ ಭಾಗವನ್ನಾಗಿಸಲು ಪ್ರಯತ್ನಿಸುತ್ತಿವೆ ಎಂದು ದೂರಿದ್ದಾರೆ.
ಉಕ್ರೇನ್–ರಷ್ಯಾ ಯುದ್ಧದ ಸುತ್ತಲೂ ಬಿಕ್ಕಟ್ಟುಗಳು ಸೃಷ್ಟಿಯಾಗುತ್ತಿವೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಪರಿಸ್ಥಿತಿ ಕ್ಷೀಣಿಸುತ್ತಿದೆ. ಆದರೆ, ಪ್ರಾಮಾಣಿಕ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುವ ಬದಲು, ಪಾಶ್ಚಿಮಾತ್ಯ ರಾಷ್ಟ್ರಗಳು ಅಂತರರಾಷ್ಟ್ರೀಯ ಸಂಸ್ಥೆಗಳ ಮೇಲಿನ ವಿಶ್ವಾಸವನ್ನು ದುರ್ಬಲಗೊಳಿಸುತ್ತಿವೆ. ವಿಶ್ವಸಂಸ್ಥೆಯಲ್ಲಿಯೂ ನಕಾರಾತ್ಮಕ ಪ್ರವೃತ್ತಿಯನ್ನು ಪ್ರೋತ್ಸಾಹಿಸುತ್ತಿವೆ ಎಂದೂ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.