ADVERTISEMENT

ಅಮೆರಿಕದ ಯಾವುದೇ ನಾಯಕರೊಂದಿಗೆ ಕೆಲಸ ಮಾಡಲು ಸಿದ್ಧ: ರಷ್ಯಾ

ರಾಯಿಟರ್ಸ್
Published 18 ಜುಲೈ 2024, 2:22 IST
Last Updated 18 ಜುಲೈ 2024, 2:22 IST
<div class="paragraphs"><p>ರಷ್ಯಾ ವಿದೇಶಾಂಗ ಸಚಿವ ಸೆರ್ಗೇ ಲಾವ್ರೋವ್‌</p></div>

ರಷ್ಯಾ ವಿದೇಶಾಂಗ ಸಚಿವ ಸೆರ್ಗೇ ಲಾವ್ರೋವ್‌

   

ರಾಯಿಟರ್ಸ್‌ ಚಿತ್ರ

ವಿಶ್ವಸಂಸ್ಥೆ: ಅಮೆರಿಕನ್ನರು ಚುನಾಯಿಸುವ ಯಾವುದೇ ನಾಯಕನೊಂದಿಗೆ ಕೆಲಸ ಮಾಡಲು ರಷ್ಯಾ ಸಿದ್ಧವಿದೆ ಎಂದು ಆ ದೇಶದ ವಿದೇಶಾಂಗ ಸಚಿವ ಸೆರ್ಗೇ ಲಾವ್ರೋವ್‌ ಬುಧವಾರ ತಿಳಿಸಿದ್ದಾರೆ.

ADVERTISEMENT

ವಿಶ್ವಸಂಸ್ಥೆಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಷ್ಯಾ ವಿರುದ್ಧ ಅಮೆರಿಕ ತೀಕ್ಷ್ಣ ಹೇಳಿಕೆಗಳನ್ನು ನೀಡಿದೆ. ಆದಾಗ್ಯೂ, ಹಿಂದಿನ ಆಡಳಿತಗಳ ಅವಧಿಯಲ್ಲಿ ನಡೆಸಲಾಗಿದ್ದ ಮಾತುಕತೆಗಳು ಇನ್ನೂ ಚಾಲ್ತಿಯಲ್ಲಿವೆ ಎಂದು ಲಾವ್ರೋವ್ ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಈ ವರ್ಷಾಂತ್ಯದಲ್ಲಿ ನಡೆಯಲಿದೆ. ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರ ಮೇಲೆ ಇತ್ತೀಚೆಗೆ ಗುಂಡಿನ ದಾಳಿ ನಡೆದಿತ್ತು. ಅಧ್ಯಕ್ಷ ಜೋ ಬೈಡನ್‌ ಅವರು ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿಯಾಗಿ ಮತ್ತೊಮ್ಮೆ ಆಯ್ಕೆ ಬಯಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.