ಮಾಸ್ಕೊ: ಉಕ್ರೇನ್ ಡ್ರೋನ್ ಕಾಣಿಸಿಕೊಂಡಿದ್ದರಿಂದ ಮುನ್ನೆಚ್ಚರಿಕೆಯಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ಇಲ್ಲಿನ ಎರಡು ವಿಮಾನ ನಿಲ್ದಾಣಗಳಲ್ಲಿ ಆಗಮನ ಮತ್ತು ನಿರ್ಗಮನ ಸೇವೆಯನ್ನು ಸೋಮವಾರ ಮತ್ತೆ ಆರಂಭಿಸಲಾಗಿದೆ.
ಮಾಸ್ಕೊ ಪ್ರದೇಶದ ಮೇಲೆ ಉಕ್ರೇನ್ ಡ್ರೋನ್ ಹಾರಾಟ ನಡೆಸಿದ್ದರಿಂದ ಡೊಮೊಡೆಡೊವೊ ಹಾಗೂ ನುಕೊವೊ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಖಾತ್ರಿಪಡಿಸಿಕೊಳ್ಳುವುದಕ್ಕಾಗಿ ಕ್ರಮ ಕೈಗೊಳ್ಳಲಾಗಿತ್ತು.
ಇದೀಗ ಕಾರ್ಯಾಚರಣೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ
ರಷ್ಯಾ ಸೇನೆ 2022ರ ಫೆಬ್ರುವರಿಯಲ್ಲಿ ಉಕ್ರೇನ್‌ನಲ್ಲಿ ಸೇನಾ ಕಾರ್ಯಾಚರಣೆ ಆರಂಭಿಸಿತ್ತು. ಉಭಯ ದೇಶಗಳ ಸೇನಾಪಡೆಗಳು ಒಂದೂವರೆ ವರ್ಷದಿಂದ ಹೋರಾಟ ನಡೆಸುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.