ಕೀವ್: ರಷ್ಯಾ ಜತೆ ಸಂಪರ್ಕವಿರುವ ದೇಶದ 11 ರಾಜಕೀಯ ಪಕ್ಷಗಳ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅಮಾನತು ಮಾಡಿ ಆದೇಶಿಸಿದ್ದಾರೆ.
ದೇಶದ ಜನರನ್ನುದ್ದೇಶಿಸಿ ಬಿಡುಗಡೆ ಮಾಡಿರುವ ವಿಡಿಯೊ ಸಂದೇಶದಲ್ಲಿ ಅವರು, ‘ಮಾರ್ಷಿಯಲ್ ಲಾ’ ಅನ್ವಯ ರಷ್ಯಾ ಜತೆ ಸಂಪರ್ಕವಿಟ್ಟುಕೊಂಡಿದ್ದ ರಾಜಕೀಯ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಘೋಷಿಸಿದ್ದಾರೆ.
ದೇಶದ ಸಂಸತ್ತಿನಒಟ್ಟಾರೆ 450 ಸದಸ್ಯರ ಪೈಕಿ 44 ಸದಸ್ಯರನ್ನು ಹೊಂದಿರುವ ಪ್ರತಿಪಕ್ಷ ಸೇರಿದಂತೆ ಇತರ ಪಕ್ಷಗಳನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.