ಕೀವ್: ರಷ್ಯಾ ಪಡೆಗಳು ಉಕ್ರೇನ್‌ನ ಉತ್ತರ ಭಾಗದಲ್ಲಿರುವ ಸುಮಿ ನಗರದ ಜನವಸತಿ ಪ್ರದೇಶದ ಮೇಲೆ ಭಾನುವಾರ ತಡರಾತ್ರಿ ಖಂಡಾಂತರ ಕ್ಷಿಪಣಿ ದಾಳಿ ನಡೆಸಿದೆ. ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದು, 84 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಸುಮಿ ನಗರದ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟವರಲ್ಲಿ 9 ವರ್ಷದ ಬಾಲಕ, 14 ವರ್ಷದ ಬಾಲಕಿಯೂ ಸೇರಿದ್ದಾರೆ. ಈ ವೇಳೆ ಗಾಯಗೊಂಡ 6 ಮಕ್ಕಳ ಸ್ಥಿತಿ ಗಂಭೀರವಾಗಿದೆ. ದಾಳಿಯಿಂದಾಗಿ ಎರಡು ಶಾಲೆಗಳು ಸೇರಿ 15 ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಪ್ರಾದೇಶಿಕ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ.
ಸುಮಿ ನಗರವು ರಷ್ಯಾದ ಗಡಿಯಿಂದ 40 ಕಿ.ಮೀ. ದೂರದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.