ಮೆಕ್ಕಾ: ಮೆಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ಗುರುವಾರದಿಂದ ಆರಂಭವಾಗಲಿದ್ದು, ಈಗಾಗಲೇ 10 ಲಕ್ಷ ಮಂದಿ ಅಲ್ಲಿ ಸೇರಿದ್ದಾರೆ. ಕೋವಿಡ್ ಪಿಡುಗಿನ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ಮಂದಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಈ ಬಾರಿ ವಿದೇಶಗಳಿಂದ 8.5 ಲಕ್ಷ ಮಂದಿಗೆ ಹಜ್ ಯಾತ್ರೆ ಕೈಗೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ. ಯಾತ್ರೆಯಲ್ಲಿಪಾಲ್ಗೊಳ್ಳುವವರು 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಪ್ರಯಾಣ ಮಾಡುವ ಸಮಯಕ್ಕೂ ಮುಂಚಿನ 72 ಗಂಟೆಗಳ ಒಳಗೆ ಕೋವಿಡ್ ಪರೀಕ್ಷೆ ಮಾಡಿಸಿ, ನೆಗೆಟಿವ್ ವರದಿಯನ್ನು ಪಡೆದಿರಬೇಕು ಎಂಬ ನಿಯಮ ರೂಪಿಸಲಾಗಿದೆ.
2019ರಲ್ಲಿ 25 ಲಕ್ಷ ಮಂದಿ ಹಜ್ ಯಾತ್ರೆ ಕೈಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.