ನವದೆಹಲಿ: ಸೌದಿ ಅರೇಬಿಯಾವು ನವೆಂಬರ್‌ನಲ್ಲಿ ಭಾರತಕ್ಕೆ ಹೆಚ್ಚುವರಿಯಾಗಿ 40 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಸಲಿದೆ ಎಂದು ಮೂಲಗಳು ತಿಳಿಸಿವೆ.
ಇರಾನ್‌ನಿಂದ ಕಚ್ಚಾ ತೈಲ ಖರೀದಿಗೆ ಅಮೆರಿಕ ಹೇರಿರುವ ನಿರ್ಬಂಧ ನವೆಂಬರ್ 4ರಿಂದ ಜಾರಿಗೆ ಬರಲಿದೆ. ಹೀಗಾಗಿ ಪೂರೈಕೆ ಹೆಚ್ಚಿಸಲು ಸೌದಿ ಅರೇಬಿಯಾ ಮುಂದಾಗಿದೆ. ನಿರ್ಬಂಧದ ಹಿನ್ನೆಲೆಯಲ್ಲಿ ಹಲವು ಸಂಸ್ಕರಣಾ ಘಟಕಗಳು ಇರಾನ್‌ನಿಂದ ಕಚ್ಚಾ ತೈಲ ಖರೀದಿ ಸ್ಥಗಿತಗೊಳಿಸುವ ಸುಳಿವು ನೀಡಿವೆ ಎನ್ನಲಾಗಿದೆ. ಇರಾನ್‌ನಿಂದ ಅತಿ ಹೆಚ್ಚು ಕಚ್ಚಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಪೈಕಿ ಭಾರತವು ಚೀನಾದ ನಂತರದ ಸ್ಥಾನದಲ್ಲಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಎಂಆರ್‌ಪಿಎಲ್‌ಗಳು ನವೆಂಬರ್‌ನಲ್ಲಿ ಸೌದಿ ಅರೇಬಿಯಾದಿಂದ ಹೆಚ್ಚುವರಿ 10 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಖರೀದಿಸಲು ಬಯಸಿವೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಕುರಿತು ಪ್ರತಿಕ್ರಿಯೆ ನೀಡಲು ಮೂರೂ ಕಂಪೆನಿಗಳು ನಿರಾಕರಿಸಿವೆ.
ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ‘ಸೌದಿ ಅರಮ್ಕೊ’ ಸಹ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.