ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಬುಧವಾರ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಭಯೋತ್ಪಾದಕ ನಾಯಕ ಸೇರಿದಂತೆ ಒಟ್ಟು ಒಂಬತ್ತು ಉಗ್ರರನ್ನು ಹತ್ಯೆ ಮಾಡಿವೆ ಎಂದು ಸೇನೆಯು ಗುರುವಾರ ತಿಳಿಸಿದೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬಜೌರ್ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಕಾರ್ಯಾಚರಣೆ ನಡೆಸಲಾಯಿತು ಎಂದು ಸೇನೆಯ ಮಾಧ್ಯಮ ವಿಭಾಗವು ತಿಳಿಸಿದೆ.
ಹತರಾದವರ ಪೈಕಿ ಇಬ್ಬರು ಆತ್ಮಾಹುತಿ ಬಾಂಬ್ ದಾಳಿಕೋರರಾಗಿದ್ದರು ಹಾಗೂ ಒಬ್ಬ ಭಯೋತ್ಪಾದಕ ಗುಂಪಿನ ಮುಖ್ಯಸ್ಥನಾಗಿದ್ದ. ಹತ್ಯೆಯಾದವರು ನಾಗರಿಕರು ಹಾಗೂ ಭದ್ರತಾ ಪಡೆಗಳ ಮೇಲೆ ನಡೆದ ಅನೇಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಸೇನೆಯು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.